Your Cart

Need help? Call +91 9535015489

📖 Print books shipping available only in India. ✈ Flat rate shipping

ಜಗಳ

     ಸಮಯವಿದ್ದುದರಿಂದ ಮೂಢ ತನ್ನ ಗೆಳೆಯ ಮಂಕನನ್ನು ಮಾತನಾಡಿಸಿಕೊಂಡು ಬರಲು ಆತನ ಮನೆಗೆ ಹೋದ. ಆ ಸಮಯದಲ್ಲಿ ಮಂಕ ಮತ್ತು ಅವನ ಪತ್ನಿಯ ನಡುವೆ ಯಾವುದೋ ವಿಷಯಕ್ಕೆ ಬಿರುಸಿನ ವಾಗ್ವಾದ ನಡೆದಿತ್ತು. ಸಂದರ್ಭ ಸರಿಯಿಲ್ಲವೆಂದು ಮೂಢ ಹಿಂತಿರುಗಿ ಹೋಗಬೇಕೆಂದಿದ್ದಾಗ ಅವನನ್ನು ನೋಡಿದ ಗೆಳೆಯ ‘ಏಯ್, ಬಾರೋ’ ಎಂದು ನಗುತ್ತಾ ಆಹ್ವಾನಿಸಿದ. ‘ಊರಗಲ ಬಾಯಿ ಮಾಡಿಕೊಂಡು ಮಾತಾಡಿಸೋದು ನೋಡು’ಎಂದು ಮೂದಲಿಸಿದ ಪತ್ನಿ ಮೂಢನಿಗೆ ‘ನೋಡಣ್ಣಾ, ಇವರು ಊರಿನವರೊಂದಿಗೆಲ್ಲಾ ನಗುನಗುತ್ತಾ ಮಾತನಾಡುತ್ತಾರೆ. ನನ್ನ ಹತ್ತಿರ ಮುಖ ಗಂಟಿಕ್ಕಿಕೊಂಡು ಮಾತಾಡುತ್ತಾರೆ’ […]

ಪಿಕಳಾರನ ಸಂಸಾರ

ಹಕ್ಕಿಯೊಂದು ಹಾರಿ ಬಂದು ಕಿಟಕಿಯಲ್ಲಿ ಕುಳಿತಿತು ಸುತ್ತಮುತ್ತ ಹಾರಿತು ಅತ್ತ ಇತ್ತ ನೋಡಿತು | ಸರಿಯೆಂದು ಕಂಡಿತು ಗೂಡನೊಂದು ಕಟ್ಟಿತು ಕಾಲ ಕೂಡಿ ಬಂದಿತು ಮೊಟ್ಟೆ ಮೂರು ಇಟ್ಟಿತು || ಹಕ್ಕಿಗಾಗಿ ಕೋಣೆ ತೆರವು ಮನೆಮಂದಿಯಲ್ಲ ನೆರವು ತಾಯಿಗಿಲ್ಲ ತಲೆಭಾರ ಜೀವಸೆಲೆಗೆ ಉಪಕಾರ | ಬಿಟ್ಟ ಬಾಣದಂತೆ ಹಾರಿ ಬಂದವರನು ಹೆದರಿಸಿತು ಕಾವಲಿದ್ದು ಕಾವು ಕೊಟ್ಟು ತಾಯಿತನವ ಮೆರೆಯಿತು|| ಮೊಟ್ಟೆ ಬಿರಿದು ಬೊಮ್ಮಟೆಗಳು ಬಂದವು ತ್ರಾಣವಿಲ್ಲ ಕಾಣದೆಲ್ಲ ಕಿಚಿಪಿಚಿ ಕದಲಿದವು | ನಾವು ತಾಳಲಾರೆವು ಅಮ್ಮ ಹಸಿವೆ […]

ಅರಿವು

ನಮ್ಮವರೆಂಬರು ನಮ್ಮವರಲ್ಲ; ಮೋಹಕೆ ಸಿಲುಕಿ ಬಳಲಿದೆನಲ್ಲ | ದೇವ ನಿನ್ನನು ನೆನೆಯಲೆ ಇಲ್ಲ; ಹುಟ್ಟಿನ ಮಹತಿ ತಿಳಿಯಲೆ ಇಲ್ಲ || ಪ || ಕಂಡದ್ದೆಲ್ಲ ಬಯಸಿದೆನಲ್ಲ; ಸಿಕ್ಕದೆ ಇರಲು ಶಪಿಸಿದೆನಲ್ಲ | ಇಲ್ಲದ ಬಯಸಿ ಕೊರಗಿದೆನಲ್ಲ; ಇದ್ದುದ ಬಿಟ್ಟು ಕೆಟ್ಟೆನಲ್ಲ || 1 || ಚಪಲತೆ ಕಣ್ಣನು ಮುಚ್ಚಿತಲ್ಲ; ನಿಜ ಕಾಣದಾಯಿತಲ್ಲ | ಚಂಚಲ ಬುದ್ಧಿ ಆಡಿದ ಆಟಕೆ ಎಡವಿ ಬಿದ್ದೆನಲ್ಲಾ || 2 || ಸಜ್ಜನ ಸಂಗವ ಮಾಡಲಿಲ್ಲ; ಸದ್ಗತಿ ಸಿಗಲಿಲ್ಲ | ಕೋಪವು ಮತಿಯ […]

ದೇಹದಾನ – ಕೆಲವು ಮಾಹಿತಿಗಳು, ನನ್ನ ಲೇಖನಕ್ಕೆ ಬಂದ ಪ್ರತಿಕ್ರಿಯೆಗಳು

ದೇಹದಾನ ಕುರಿತ ನನ್ನ ಲೇಖನಕ್ಕೆಬಂದ ಪ್ರತಿಕ್ರಿಯೆಗಳು ವಿಚಾರಾರ್ಹವಾಗಿರುವುದರಿಂದ ನಿಮ್ಮೊಡನೆ ಹಂಚಿಕೊಳ್ಳುತ್ತಿರುವೆ: ‘ಸಂಪದ’ ತಾಣದಲ್ಲಿ: ಕವಿನಾಗರಾಜರೆ, ನೂರಾರು ವರ್ಷ ಆರೋಗ್ಯವಂತರಾಗಿ ಬಾಳಿ ಎಂದು ಮೊದಲಿಗೆ ಹಾರೈಸುವೆ. ನಿಮ್ಮ ಅಂಗಾಂಗ ದಾನ,ದೇಹದಾನದ ನಿರ್ಧಾರಕ್ಕೆ ಜೈ. ಕೊನೆಯಲ್ಲಿ ಹೇಳಿದ ಮಾತು ತುಂಬಾ ಚೆನ್ನಾಗಿದೆ-“…ವಾಸ್ತವತೆ ಅರಿತಲ್ಲಿ, ಬದುಕಿನ ಮಹತ್ವ ತಿಳಿದಲ್ಲಿ ನನ್ನ ಈ ಬಯಕೆ ನಿಜವಾಗಿ ಬದುಕುವ ಬಯಕೆ ಎಂಬುದು ಅರ್ಥವಾಗಬಹುದು.” ನಿಮ್ಮ ಮುಕ್ತಕಗಳು ನಾಗರತ್ನಮ್ಮನವರು ಹೇಳಿದಂತೆ ಅನರ್ಘ್ಯ ರತ್ನಗಳು. ಮೈಲಾರ ಶರ್ಮ ಹಾಗೂ ಅವರ ಕುಟುಂಬದವರು ಇತರರಿಗೆ ಆದರ್ಶಪ್ರಾಯರು. -ಗಣೇಶ. **************** […]

ಮೇಲಕ್ಕೇರಿದ ಮೈಲಾರಶರ್ಮ

ನಾನು ಹಾಸನದ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದಾಗ ನನ್ನ ಸಹೋದ್ಯೋಗಿಯಾಗಿದ್ದವರು ಮೈಲಾರಶರ್ಮ. ನನಗೆ ಸುಮಾರು ೩೫-೩೬ ವರ್ಷಗಳಿಂದ ಪರಿಚಯಸ್ಥರು. ನನಗಿಂತ 8-10 ವರ್ಷ ದೊಡ್ಡವರು. ಎಲ್ಲರೊಂದಿಗೆ ಒಳ್ಳೆಯ ಬಾಂಧವ್ಯ ಹೊಂದಿದ್ದ ಸರಳ ವ್ಯಕ್ತಿ, ಸಂಪ್ರದಾಯಸ್ಥ. ನಿವೃತ್ತರಾದ ಮೇಲೆ ಪೂಜೆ, ಪುನಸ್ಕಾರ, ತೀರ್ಥಕ್ಷೇತ್ರಗಳಿಗೆ ಪ್ರವಾಸ ಮಾಡಿಕೊಂಡಿದ್ದವರು. ಅವರು ದಿನಾಂಕ ೨೭-೦೫-೨೦೧೧ರ ಬೆಳಿಗ್ಗೆ ವಿಧಿವಶರಾದರು. ನನಗೆ ಆಶ್ಚರ್ಯ ಮತ್ತು ಸಂತೋಷದ ವಿಷಯವಾಗಿ ತಿಳಿದದ್ದೇನೆಂದರೆ ಅವರ ದೇಹವನ್ನು ಹಾಸನದ ಮೆಡಿಕಲ್ ಕಾಲೇಜಿಗೆ ದಾನವಾಗಿ ನೀಡಿದ್ದು. ಅವರ ಕಣ್ಣುಗಳೂ ಸಹ ಉಪಯೋಗಕ್ಕೆ ಬಂದದ್ದು. […]

ಸೋಲದಿರು

ದೂಷಿಸದಿರು ಮನವೆ ಪರರು ಕಾರಣರಲ್ಲ ನಿನ್ನೆಣಿಕೆ ತಪ್ಪಾಗಿ ಕಂಡಿರುವೆ ನೋವ | ವಿಧಿಯು ಕಾರಣವಲ್ಲ ಹಣೆಬರಹ ಮೊದಲಲ್ಲ ಕೊರಗಿದರೆ ಫಲವಿಲ್ಲ ದಣಿಯದಿರು ಮನವೆ || ಉಗ್ರವಾಗಿಹ ಮನವೆ ತಾಳು ತಾಳೆಲೆ ನೀನು ವಿವೇಕ ನಲುಗೀತು ಕೆರಳದಿರು ತಾಳು | ವ್ಯಗ್ರತೆಯ ನಿಗ್ರಹಿಸಿ ಸಮಚಿತ್ತದಲಿ ನಡೆಯೆ ಸೋಲಿನ ಅನುಭವವೆ ಗೆಲುವಿಗಾಸರೆಯು || ಮೂಢನಂತಾಡದಿರು ಮತಿಗೆಟ್ಟು ನರಳದಿರು ಮೈ ಕೊಡವಿ ಮೇಲೆದ್ದು ಅಡಿಯನಿಡು ಧೀರ | ಸೋಲದಿರೆಲೆ ಜೀವ ಕಾಯ್ವ ನಮ್ಮನು ದೇವ ಛಲಬಿಡದೆ ಮುನ್ನಡೆದು ಉಳಿಸು ಸ್ವಂತಿಕೆಯ || […]

ಭಾವಕಟ್ಟು

     ಅಣೆಕಟ್ಟಿನಲ್ಲಿ ನೀರಿದೆ. ಒಳಹರಿವು ಹೆಚ್ಚಾದಂತೆ ನೀರನ್ನು ಕ್ರೆಸ್ಟ್ ಗೇಟ್ ತೆರೆದು ಹೊರಬಿಡಲಾಗುತ್ತದೆ. ನೀರನ್ನು ಹೊರಬಿಡದೆಹೋದರೆ? ಅಣೆಕಟ್ಟು ತುಂಬಿ ಹೆಚ್ಚಾದ ನೀರು ಹೊರಬರುತ್ತದೆ. ನೀರಿನ ದಬ್ಬುವ ಶಕ್ತಿ ಒಳಹರಿವು ಹೆಚ್ಚಾದಂತೆ ಹೆಚ್ಚುತ್ತಾ ಹೋಗಿ ಅಣೆಕಟ್ಟಿಗೆ ಅಪಾಯವಾಗಬಹುದು. ಭೂಕಂಪ, ಪ್ರಕೃತಿ ವಿಕೋಪ, ಮಾನವ ನಿರ್ಮಿತ ಅನಾಹುತ, ಇತ್ಯಾದಿ ಯಾವುದೇ ಕಾರಣಕ್ಕೆ ಅಣೆಕಟ್ಟು ಒಡೆದರೆ? ಆಗ ಆಗುವ ನಷ್ಡ ಅಗಾಧ. ಮಾನವನ ಮನಸ್ಸನ್ನೂ ಅಣೆಕಟ್ಟು ಇರುವ ಜಲಾಶ್ರಯಕ್ಕೆ ಹೋಲಿಸಬಹುದು. ನೀರಿನ ಬದಲಿಗೆ ಅಲ್ಲಿ ಭಾವನೆಗಳು ಇರುತ್ತದೆ. ಭಾವನೆಗಳು ಮಡುಗಟ್ಟಲು […]

ಸಂಪ್ರದಾಯಗಳು ಮತ್ತು ನಾವು

ಸುಗಮ ಜೀವನಕೆ ಕಟ್ಟುಪಾಡುಗಳು ಬೇಕು ಮೀರಿದರೆ ಆಪತ್ತು ನೆಮ್ಮದಿಯು ಹಾಳು | ಶಾಸ್ತ್ರವಿಧಿಗಳು ಬೇಕು ಮಂಗಳವ ತರಲು ವಿವೇಕದಿಂದನುಸರಿಸೆ ಸುಖವು ಮೂಢ ||      ಒಂದು ಕಾಲವಿತ್ತು, ಕೈ ಹಿಡಿದ ಗಂಡ ಗತಿಸಿದರೆ ವಿಧವೆ ಪತ್ನಿ ಕೇಶ ಮುಂಡನ ಮಾಡಿಸಿಕೊಂಡು, ಕೆಂಪು ಅಥವಾ ಬಿಳಿ ಸೀರೆ ಉಟ್ಟುಕೊಂಡು, ಕೈಗೆ ಬಳೆ ಹಾಕಿಕೊಳ್ಳದೆ, ಹಣೆಗೆ ಕುಂಕುಮ ಇಟ್ಟುಕೊಳ್ಳದೆ ಒಂದು ರೀತಿಯ ಒಂಟಿ ಹಾಗೂ ಬಲವಂತದ ವೈರಾಗ್ಯದ ಜೀವನ ನಡೆಸಬೇಕಾಗಿದ್ದ ಕಾಲವಿತ್ತು. ಚಿಕ್ಕ ವಯಸ್ಸಿನಲ್ಲೇ ವಿಧವೆಯಾದವರ ಪಾಡು ಅನುಭವಿಸಿದವರಿಗೇ […]

ಪ್ರೀತಿಯ ಅಂತ್ಯ

     ಒಂದು ಸುಂದರವಾದ ದ್ವೀಪವಿತ್ತು. ಅಲ್ಲಿ ಎಲ್ಲಾ ಭಾವನೆಗಳೂ ಸಾಮರಸ್ಯದಿಂದ ಬಾಳುತ್ತಿದ್ದವು. ಒಂದು ದಿನ ದೊಡ್ಡ ಪ್ರವಾಹ ಬಂದು ದ್ವೀಪ ಮುಳುಗುವ ಸ್ಥಿತಿ ಉಂಟಾಯಿತು. ಎಲ್ಲಾ ಭಾವನೆಗಳೂ ಜೀವಭಯದಿಂದ ತತ್ತರಿಸಿದವು. ಜೀವ ಉಳಿಸಿಕೊಳ್ಳಲು ಪರದಾಡಿದವು. ಆಗ ಪ್ರೀತಿ ಒಂದು ದೋಣಿಯನ್ನು ಸಿದ್ಧಪಡಿಸಿತು. ಎಲ್ಲಾ ಭಾವನೆಗಳೂ ಜೀವ ಉಳಿದರೆ ಸಾಕೆಂದುಗಡಿಬಿಡಿಯಲ್ಲಿ ದೋಣಿ ಎರಿದವು. ಒಂದು ಭಾವನೆ ಮಾತ್ರ ದೋಣಿಯಲ್ಲಿ ಕಾಣಲಿಲ್ಲ. ಪ್ರೀತಿ ದೋಣಿ ಇಳಿದು ಬಂದು ನೋಡಿದರೆ ದುರಭಿಮಾನ ಮುಖ ಊದಿಸಿಕೊಂಡು ಒಂದುಕಡೆ ಕುಳಿತಿತ್ತು. ಅದನ್ನು ದೋಣಿ […]