ಮೈಸೂರು ಕಟ್ಟಿದ ತಾತಯ್ಯರ ಸ್ಮರಣೆ ಸೆಪ್ಟೆಂಬರ್ 5, ಶ್ರೀ ತಾತಯ್ಯ ನವರ ಜನ್ಮದಿನ. ಸೆಪ್ಟೆಂಬರ್ 11ರ ಭಾನುವಾರ ಸಂಜೆ 4ಕ್ಕೆ ಮೈಸೂರಿನ ಶಾರದಾವಿಲಾಸ ಕಾಲೇಜು ಸಭಾಂಗಣದಲ್ಲಿ ನಡೆಯುವ ಜನ್ಮದಿನಾಚರಣೆ ಕಾರ್ಯ ಕ್ರಮದಲ್ಲಿ ಹಿರಿಯ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪನವರು ತಾತಯ್ಯನವರ ಕುರಿತ ಅಂತರ್ಜಾಲ ತಾಣಕ್ಕೆ ಚಾಲನೆ ನೀಡಲಿದ್ದಾರೆ. ತನ್ನಿಮಿತ್ತ ಈ ಲೇಖನ. ಪ್ರತಿಯೊಂದು ದೇಶ, ರಾಜ್ಯ, ನಗರ ಸಮಾಜಗಳ ಇತಿಹಾಸದಲ್ಲಿ ಅದನ್ನು ಕಟ್ಟಿ ಬೆಳೆಸಿದ ಮಹನೀಯರ ಪರಿಶ್ರಮ, ಕಳಕಳಿ, ತ್ಯಾಗ ಬಲಿದಾನಗಳ ಪಾತ್ರ ಮಹತ್ತರವಾದುದು. ಆದರಿಂದು ಸಮಾಜದ […]
Author: ramachandrahegde
ಪ್ರೊ. ಎಸ್. ಕೆ. ರಾಮಚಂದ್ರರಾವ್ ಅವರ ಜನ್ಮದಿನ ಸ್ಮರಣೆ….
ಪ್ರೊ. ಎಸ್. ಕೆ. ರಾಮಚಂದ್ರರಾವ್ ಅವರ ಜನ್ಮದಿನ ಸ್ಮರಣೆ…. ನಮ್ಮ ಜೀವಿತ ಕಾಲದಲ್ಲಿ ಇಂತಹ ಅಪ್ರತಿಮ ವಿದ್ವಾಂಸರಿದ್ದರು ಎಂದರೆ ಅಚ್ಚರಿಹುಟ್ಟಿಸುವಷ್ಟು ಶ್ರೇಷ್ಠರಾದ ಪ್ರೊ. ಎಸ್.ಕೆ. ರಾಮಚಂದ್ರರಾವ್ ಅವರ ಜನ್ಮದಿನ ಸ್ಮರಣೆ… On the birth anniversary of one among the greatest scholar of our tomes Prof. S. K. Ramachandra Rao…. ನಮ್ಮ ನಾಡು ಕಂಡ ಅಪ್ರತಿಮ ವಿದ್ವಾಂಸವರೇನ್ಯರಲ್ಲೊನ್ನರಾದ ಪ್ರೊ. ಎಸ್.ಕೆ. ರಾಮಚಂದ್ರ ರಾಯರು ಸೆಪ್ಟೆಂಬರ್ 4, 1925ರಂದು ಹಾಸನದಲ್ಲಿ ಜನಿಸಿದರು. ಅವರ […]
ನಮ್ಮ ಇಂದಿಗಾಗಿ ತಮ್ಮ ನಾಳೆಗಳನ್ನು ಬಲಿಕೊಟ್ಟವರು….
ನಮ್ಮ ಇಂದಿಗಾಗಿ ತಮ್ಮ ನಾಳೆಗಳನ್ನು ಬಲಿಕೊಟ್ಟವರು…. “ಮೇರಾ ರಂಗ್ ದೇ , ಮಾಯಿ ರಂಗ್ ದೇ, ಮೇರಾ ರಂಗ್ ದೇ ಬಸಂತೀ ಚೋಲಾ……..” ಹಾಗೊಂದು ಹಾಡು ಲಾಹೋರ್ನ ಜೈಲಿನ ಗೋಡೆ ಗೋಡೆಗಳಲ್ಲಿ ಅನುರಣಿಸುತ್ತಾ, ಕೇಳಿದವರ ಎದೆಯಲ್ಲಿ ಹೊಸತೊಂದು ಭಾವ ಸೃಷ್ಟಿಸುತ್ತಾ ಸೆರೆಮನೆಯ ಎಲ್ಲೆಯನ್ನು ದಾಟಿ ಮಾರ್ದನಿಸುತ್ತಿತ್ತು. ಆ ಹಾಡು ಲಾಹೋರಿನ ಜೈಲಿನಲ್ಲಿ ಖೈದಿಗಳಿಗಾಗಿ ಏರ್ಪಡಿಸಿದ್ದ ಯಾವುದೋ ಸಾಂಸ್ಕೃತಿಕ ಕಾರ್ಯಕ್ರಮದ್ದಾಗಲಿ, ಸಂಗೀತ ಗೋಷ್ಟಿಯದ್ದಾಗಲಿ ಆಗಿರಲಿಲ್ಲ. ದೇಶಭಕ್ತಿಯ ಮಹಾಪರಾಧಕ್ಕಾಗಿ ನೇಣಿನ ಶಿಕ್ಷೆಗೆ ಒಳಗಾದ ಮೂವರು ಭಾರತೀಯ ಯುವಕರು ತಮ್ಮ ಬಲಿದಾನದ ಸಮಯ ಹತ್ತಿರವಾಯಿತೆಂದು ಸಂಭ್ರಮದಿಂದ ಆನಂದದಿಂದ ಹೇಳತೊಡಗಿದ್ದ […]
ದೇಶಾಭಿಮಾನಿ ರಾಣಿ ಗಾಯಡಿನ್ ಲೂ
ದೇಶಾಭಿಮಾನಿ ರಾಣಿ ಗಾಯಡಿನ್ ಲೂ ರಾಣಿ ಗಾಯಡಿನ್ ಲೂ: ಹೆಸರು ಕೇಳಿದರೆ ಇದು ಯಾರೋ ಬ್ರಿಟಿಷ್ ವ್ಯಕ್ತಿ ಅನ್ನಿಸಬಹುದು. ಆದರೆ ಈ ರಾಣಿ ಗಾಯಡಿನ್ ಲೂ ಈಶಾನ್ಯ ರಾಜ್ಯ ನಾಗಲ್ಯಾಂಡ್ ನ ಆಧ್ಯಾತ್ಮಿಕ ಹಾಗೂ ರಾಜಕೀಯ ಹೋರಾಟದ ನಾಯಕಿಯಾಗಿದ್ದ, ಬ್ರಿಟಿಷ್ ಆಡಳಿತದ ವಿರುದ್ಧ ಈಶಾನ್ಯ ರಾಜ್ಯದಲ್ಲಿ ದಂಗೆ ಎಬ್ಬಿಸಿದ ದಿಟ್ಟ ಮಹಿಳೆ. ತನ್ನ 12ನೇ ವಯಸ್ಸಿಗೇ ಹೋರಾಟಕ್ಕೆ ಧುಮುಕಿ 16ನೇ ವಯಸ್ಸಿಗೆ ಜೀವಾವಧಿ ಶಿಕ್ಷೆಗೆ ಗುರಿಯಾದ, ಈಕೆಯ ಕೇವಲ 4 ವರ್ಷಗಳ ಹೋರಾಟದ ತಾಕತ್ತು ಎಂಥದ್ದು ಎಂದು […]
ದಕ್ಷಿಣ ಕನ್ನಡದ ಗಾಂಧಿ ಕಾರ್ನಾಡ್ ಸದಾಶಿವರಾಯರು
ದಕ್ಷಿಣ ಕನ್ನಡದ ಗಾಂಧಿ ಕಾರ್ನಾಡ್ ಸದಾಶಿವರಾಯರು ಕಾರ್ನಾಡ್ ಸದಾಶಿವ ರಾಯರು: ಬೆಂಗಳೂರಿನ ಪ್ರತಿಷ್ಠಿತ ಬಡಾವಣೆ ‘ಸದಾಶಿವ ನಗರ’ ಎಂಬುದು ಎಲ್ಲರಿಗೂ ತಿಳಿದದ್ದೇ. ಆದರೆ ಅದ್ಯಾರು ಸದಾಶಿವ ಎಂಬುದು ಬಹುತೇಕರಿಗೆ ತಿಳಿಯದು. ಆ ಸದಾಶಿವರೇ ಅಪ್ರತಿಮ ದೇಶಭಕ್ತ ದಕ್ಷಿಣ ಕನ್ನಡದ ಗಾಂಧಿ ಎಂದೇ ಸುಪ್ರಸಿದ್ಧರಾದ ಶ್ರೀ ಕಾರ್ನಾಡ್ ಸದಾಶಿವರಾಯರು. ಇವರು ಮಂಗಳೂರನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡು ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡವರು. ಸದಾಶಿವರಾಯರ ಮನೆ ಸ್ವಾತಂತ್ರ್ಯ ಸಂಗ್ರಾಮದ ತವರು ಮನೆಯಾಗಿತ್ತು. ಮಹಾತ್ಮಾ ಗಾಂಧಿ, ಚಿತ್ತರಂಜನ ದಾಸ, ರಾಜಗೋಪಾಲಾಚಾರಿ ಹಾಗೂ […]
ಪರಾಕ್ರಮಿ ಸದ್ಗುರು ರಾಮಸಿಂಗ್ ಕೂಕಾ
ಪರಾಕ್ರಮಿ ಸದ್ಗುರು ರಾಮಸಿಂಗ್ ಕೂಕಾ ಸದ್ಗುರು ರಾಮಸಿಂಗ್ ಕೂಕಾ : ದೇಶದ ಸ್ವಾತಂತ್ರ್ಯ ಇತಿಹಾಸದಲ್ಲಿ ಪಂಜಾಬಿ ಸಿಖ್ಖರ ಪಾತ್ರ ಬಹಳ ದೊಡ್ಡದು. ಅಪ್ರತಿಮ ದೇಶಭಕ್ತರ ಸಂಪ್ರದಾಯವದು. ಇಂದಿಗೂ ಭಾರತೀಯ ಸೈನ್ಯದಲ್ಲಿ ಸಿಖ್ಖ ರೆಜಿಮೆಂಟ್ ಎಂದರೆ ಪರಮ ಪರಾಕ್ರಮಿಗಳ ದಂಡು. ಅಂತಹ ಪಂಜಾಬಿ ಸಿಖ್ಖರ ‘ನಾಮಧಾರಿ ಸಂಪ್ರದಾಯ’ ಅಥವಾ ‘ಕೂಕಾ ಪಂಥ’ ದ ಸ್ಥಾಪಕ ಸದ್ಗುರು ರಾಮಸಿಂಗ್ ಕೂಕಾ. ಮೂಲತಃ ಬಡಗಿ ವೃತ್ತಿಯ ಕುಟುಂಬದ ರಾಮಸಿಂಗ್ ತಾನೂ ತನ್ನ ತಂದೆಯ ಬಡಗಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ನೆರವಾಗುತ್ತಿದ್ದ. […]
ತರುಣ ಬಲಿದಾನಿ ಖುದಿರಾಮ್ ಬೋಸ್
ತರುಣ ಬಲಿದಾನಿ ಖುದಿರಾಮ್ ಬೋಸ್ ಖುದಿರಾಮ್ ಬೋಸ್ (ಡಿಸೆಂಬರ್ 3, 1889 – ಆಗಸ್ಟ್ 11, 1908) ಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಪ್ರಮುಖರು. ಅತೀ ಚಿಕ್ಕ ವಯಸ್ಸಿಗೇ ಕೇವಲ 19 ರ ಹರೆಯದಲ್ಲಿ ನೇಣುಗಂಬವೇರಿದ ಪ್ರಥಮ ಬಲಿದಾನಿ ಖುದಿರಾಮ್ ಬೋಸ್. ‘ಕಿಂಗ್ಸ್ ಫೊರ್ಡ್’ಎಂಬ ಬ್ರಿಟೀಷ್ ನ್ಯಾಯಧೀಶ ಕಲ್ಕತ್ತಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಘೋರಾತಿಘೋರ ಶಿಕ್ಷೆಗಳನ್ನು ಕೊಡುತ್ತಾ ವಿಕೃತ ಆನಂದವನ್ನು ಅನುಭವಿಸುತ್ತಿದ್ದ. ಭಾರತೀಯರ ಮೇಲೆ ಆತನ ದೌರ್ಜನ್ಯ ಮಿತಿಮೀರಿತ್ತು. ಈತನ ಕ್ರೌರ್ಯಕ್ಕೆ ಕೊನೆ ಹಾಡಬೇಕೆಂದು ನಿರ್ಧರಿಸಿದ ಖುದಿರಾಮ್ ಕಿಂಗ್ಸ್ […]
ಕನ್ನಡ ನೆಲದ ಬಲಿದಾನಿ ಮೈಲಾರ ಮಹದೇವ
ಕನ್ನಡ ನೆಲದ ಬಲಿದಾನಿ ಮೈಲಾರ ಮಹದೇವ ಮೈಲಾರ ಮಹದೇವ: 1857 ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮೊದಲಿನಿಂದಲೇ ಆರಂಭಿಸಿ, ಕ್ವಿಟ್ ಇಂಡಿಯಾ ಚಳುವಳಿ, ನಂತರ ಬ್ರಿಟಿಷರು ಭಾರತ ಬಿಟ್ಟು ತೊಲಗುವವರೆಗೆ ಕರ್ನಾಟಕದಲ್ಲೂ ದೊಡ್ಡ ಮಟ್ಟದಲ್ಲಿ ವಿವಿಧ ರೀತಿಯ ಹೋರಾಟಗಳು ನಡೆದವು. ಹೋರಾಟದ ಕಿಚ್ಚು, ಕ್ರಾಂತಿಯ ಕಿಡಿ ವಿವಿಧ ರೂಪದಲ್ಲಿ ಪ್ರಕಟಗೊಂಡು ಸಾವಿರಾರು ಮಂದಿ ಭಾರತ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದರು. ಹಾಗೆ ಬ್ರಿಟಿಷರ ಗುಂಡಿಗೆ ಎದೆಕೊಟ್ಟು ವೀರಸ್ವರ್ಗ ವೇರಿದ ಅಪ್ರತಿಮ ಬಲಿದಾನಿಗಳಲ್ಲಿ ಹಾವೇರಿ ಜಿಲ್ಲೆ ಮೋಟೆಬೆನ್ನೂರಿನ ಮೈಲಾರ ಮಹದೇವ […]
ವಿವೇಕಾನಂದರ ಸೋದರ, ಕ್ರಾಂತಿಕಿಡಿ ಭೂಪೇಂದ್ರನಾಥ ದತ್ತ
ವಿವೇಕಾನಂದರ ಸೋದರ, ಕ್ರಾಂತಿಕಿಡಿ ಭೂಪೇಂದ್ರನಾಥ ದತ್ತ ಭೂಪೇಂದ್ರನಾಥ ದತ್ತ : ದೇಶವನ್ನು ದಾಸ್ಯದಿಂದ ಮುಕ್ತಿಗೊಳಿಸಲು ಒಂದೇ ಕುಟುಂಬದ ತಾಯಿ ಮಗ ಸೊಸೆ ಸೆರೆವಾಸ ಅನುಭವಿಸಿದ ಕಥೆಯನ್ನು ನಿನ್ನೆಯ ಮೈಲಾರ ಮಹಾದೇವರ ಸ್ಮರಣೆಯಲ್ಲಿ ಓದಿದ್ದೇವೆ. ದೇಶಾದ್ಯಂತ ಹಾಗೆ ಅನೇಕ ಕುಟುಂಬಗಳು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ತಮ್ಮನ್ನು ಸಂಪೂರ್ಣ ದಾಸ್ಯ ವಿಮೋಚನೆಯ ಪವಿತ್ರ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಇದು ಅಂತಹದೇ ಮತ್ತೊಂದು ದೇಶಭಕ್ತ ಕುಟುಂಬದ ಸ್ಮರಣೆ. ಇದು ಕಲಕತ್ತೆಯ ವಿಶ್ವನಾಥ ದತ್ತ ಹಾಗೂ ಭುವನೇಶ್ವರಿ ದೇವಿ ದಂಪತಿಗಳ ಇಬ್ಬರು ಪುತ್ರರತ್ನಗಳು ದೇಶದ […]