ಶ್ರೀ ವಿಷ್ಣು ಸಹಸ್ರನಾಮ (ಭಾಗ 2)

ಶ್ರೀ ಗುರುಭ್ಯೋ ನಮಃ ಹರಿಃ ಓಂ
ವಿಷ್ಣು ಸಹಸ್ರನಾಮದಲ್ಲಿ ಬರುವ ಸಾವಿರ ನಾಮಗಳು ಭಗವಂತನ ಗುಣವಾಚಕ ನಾಮಗಳಾಗಿವೆ. ನಮ್ಮ ಹೆಸರು ಗುಣವಾಚಕವಲ್ಲ. ಕರೆದಾಗ ಓಗೊಡಲು ಇಟ್ಟ ಹೆಸರು. ಆದರೆ ಭಗವಂತನ ಪ್ರತೀ ನಾಮ ಆತನ ಗುಣವನ್ನು ವರ್ಣಿಸುತ್ತದೆ. ನಮ್ಮಲ್ಲಿ ಅನೇಕ ಸಹಸ್ರನಾಮಗಳಿವೆ. ಬಹಳ ಪ್ರಸಿದ್ಧವಾದ ಲಲಿತ ಸಹಸ್ರನಾಮˌ ಶಿವ ಸಹಸ್ರನಾಮˌ ಗಣೇಶ ಸಹಸ್ರನಾಮˌ ನರಸಿಂಹ ಸಹಸ್ರನಾಮ ಇತ್ಯಾದಿ. ಈ ಎಲ್ಲಾ ಸಹಸ್ರನಾಮಗಳಿಗಿಂತ ಹೆಚ್ಚು ವ್ಯಾಖ್ಯಾನವಿರುವˌ ಹೆಚ್ಚು ಮಂದಿ ವಿದ್ವಾಂಸರು ಭಾಷ್ಯ ಬರೆದಿರುವˌ ಮಹಾಭಾರತದ ಭಾಗವಾಗಿರುವˌ ಸುಪ್ರಸಿದ್ಧ ಸಹಸ್ರನಾಮ ಶ್ರೀ ವಿಷ್ಣು ಸಹಸ್ರನಾಮ. ಪದ್ಮಪುರಾಣದಲ್ಲಿ ಒಂದು ವಿಷ್ಣು ಸಹಸ್ರನಾಮವನ್ನು ಕಾಣುತ್ತೇವೆ. ಆದರೆ ಅದು ಅಷ್ಟೊಂದು ಪ್ರಚಲಿತದಲ್ಲಿಲ್ಲ. ವಿಷ್ಣುಸಹಸ್ರನಾಮದಲ್ಲಿ ಕೆಲವೊಂದು ನಾಮಗಳು ಒಂದಕ್ಕಿಂತ ಹೆಚ್ಚು ಭಾರಿ ಪುನರಾವರ್ತನೆ ಪುನರಾವರ್ತನೆ ಆಗಿರುವುದನ್ನು ನಾವು ಕಾಣುತ್ತೇವೆ. ಇಲ್ಲಿ ಬರುವ ಒಂದೊಂದು ನಾಮಕ್ಕೆ ನೂರು ಅರ್ಥವಿದೆಯಂತೆ. ಒಂದು ನಾಮ ಎರಡು ಬಾರಿ ಪುನರಾವರ್ತನೆಯಾದರೆ ಆ ನಾಮಕ್ಕೆ ಇನ್ನೂರು ಅರ್ಥಗಳಿವೆ ಎಂದು ತಿಳಿಯಬೇಕಾಗುತ್ತದೆ. ಆದರೆ ಇಷ್ಟೊಂದು ಅರ್ಥವನ್ನು ಕಂಡುಕೊಳ್ಳುವುದು ಸಾಮಾನ್ಯರಿಗೆ ಅಸಾಧ್ಯ.
ಸಹಸ್ರನಾಮದ ರಾಜ ಮಹಾಭಾರತದ ಅನುಶಾಸನ ಪರ್ವದ ವಿಷ್ಣು ಸಹಸ್ರನಾಮ. ಪ್ರಾಚೀನರು ಹೇಳುವಂತೆ ಅಧ್ಯಾತ್ಮ ಗ್ರಂಥಗಳಲ್ಲಿ ಶ್ರೇಷ್ಠವಾದದ್ದು ವೇದವ್ಯಾಸರು ರಚಿಸಿದ ಭಾರತ. ಇದು ಭಗವಂತನ ರಚನೆ.ಆದರೆ ಸರ್ವ ಶಾಸ್ತ್ರಗಳಿಗೂ ಮಹಾಭಾರತವೇ ನಿರ್ಣಾಯಕ. ಹಿಂದೆ ಮಹಾಭಾರತ ಮತ್ತು ಸಕಲ ವೇದಗಳು ವೇದವ್ಯಾಸರ ಆದೇಶದಂತೆ ಬ್ರಹ್ಮಾದಿ ದೇವತೆಗಳಿಂದˌ ಒಂದು ತಕ್ಕಡಿಯಲ್ಲಿ ಇರಿಸಿ ತೂಗಲ್ಪಟ್ಟವು. ಆದರೆ ಮಹಾಭಾರತವು ವೇದಾದಿ ಇತರ ಸಕಲ ಶಾಸ್ತ್ರಗಳನ್ನು ಮೀರಿಸಿತ್ತು ಸಕಲ ಶಾಸ್ತ್ರಗಳನ್ನು ಮೀರಿಸಿತ್ತು. ಇಂತಹ ಮಹಾಭಾರತದ ಸಾರ 700 ಶ್ಲೋಕಗಳನ್ನೊಳಗೊಂಡ ಭಗವದ್ಗೀತೆ ಮತ್ತು ಸಾವಿರ ನಾಮಗಳನ್ನೊಳಗೊಂಡ ವಿಷ್ಣು ಸಹಸ್ರನಾಮ.
(ಮುಂದುವರಿಯುವದು)

Leave a Reply