ಪಿಕಳಾರನ ಸಂಸಾರ

ಹಕ್ಕಿಯೊಂದು ಹಾರಿ ಬಂದು ಕಿಟಕಿಯಲ್ಲಿ ಕುಳಿತಿತು
ಸುತ್ತಮುತ್ತ ಹಾರಿತು ಅತ್ತ ಇತ್ತ ನೋಡಿತು |
ಸರಿಯೆಂದು ಕಂಡಿತು ಗೂಡನೊಂದು ಕಟ್ಟಿತು
ಕಾಲ ಕೂಡಿ ಬಂದಿತು ಮೊಟ್ಟೆ ಮೂರು ಇಟ್ಟಿತು ||

ಹಕ್ಕಿಗಾಗಿ ಕೋಣೆ ತೆರವು ಮನೆಮಂದಿಯಲ್ಲ ನೆರವು
ತಾಯಿಗಿಲ್ಲ ತಲೆಭಾರ ಜೀವಸೆಲೆಗೆ ಉಪಕಾರ |
ಬಿಟ್ಟ ಬಾಣದಂತೆ ಹಾರಿ ಬಂದವರನು ಹೆದರಿಸಿತು
ಕಾವಲಿದ್ದು ಕಾವು ಕೊಟ್ಟು ತಾಯಿತನವ ಮೆರೆಯಿತು||

ಮೊಟ್ಟೆ ಬಿರಿದು ಬೊಮ್ಮಟೆಗಳು ಬಂದವು
ತ್ರಾಣವಿಲ್ಲ ಕಾಣದೆಲ್ಲ ಕಿಚಿಪಿಚಿ ಕದಲಿದವು |
ನಾವು ತಾಳಲಾರೆವು ಅಮ್ಮ ಹಸಿವೆ ಅಮ್ಮ ಹಸಿವೆ
ಬಂದೆ ತಡಿ ಇಗೋ ಹಿಡಿ ಪ್ರೀತಿ ಎಲ್ಲ ಸುರಿವೆ ||

ಹಾ ಸರಿ ಹೀಗೆ ಮರಿ ಎಲ್ಲಿ ಹಾರು ನೋಡುವ
ಹಾರುವುದ ಕಲಿತ ಮೇಲೆ ಭರ್ ಎಂದು ಹಾರುವ|
ನಿಮ್ಮ ನೆರವು ನಮ್ಮ ನಲಿವು ಎನಿತು ಮಧುರ ಸಂಬಂಧ
ದ್ವೇಷ ಬಿಡಿ ಪ್ರೀತಿಸಿರಿ ಅನಿತು ಬಾಳು ಚೆಂದ ||
spl photos 050
spl photos 048
spl photos 051
spl photos 054
spl photos 061
spl photos 061
spl photos 082
spl photos 083

spl photos 089
spl photos 090
spl photos 095
spl photos 097
spl photos 098
spl photos 109
spl photos 110
(ಆಧಾರ: ಶಿವಮೊಗ್ಗದ ದಿನಪತ್ರಿಕೆ ‘ಜನಹೋರಾಟ’ದಲ್ಲಿ ಪ್ರಕಟವಾದ ನನ್ನ ತಮ್ಮ ಕವಿ ಸುರೇಶರ ‘ಒಂದು ಗೂಡಿನ ಕಥೆ’ ಎಂಬ ಸಚಿತ್ರ ಲೇಖನ; ತಮ್ಮನ ಮನೆಯಲ್ಲಿ ಮೊಳಕೆಯೊಡೆದ ಪಿಕಳಾರನ ಸಂಸಾರದ ಕಥೆಯಿದು. ಚಿತ್ರಗಳು: ಬಿ.ಎಸ್.ಆರ್. ದೀಪಕ್.)
-ಕ.ವೆಂ.ನಾಗರಾಜ್.

Leave a Reply