Your Cart

Need help? Call +91 9535015489

📖 Print books shipping available only in India. ✈ Flat rate shipping

ಬಹುರೂಪ

Purushottama Bilimale
$1.45

Product details

Category

Articles

Author

Purushottama Bilimale

Publisher

Yaji Prakashana

Language

Kannada

ISBN

978-93-83717-00-2

Book Format

Ebook

Year Published

2013

ಬಹುರೂಪ
ಡಾ. ಪುರುಷೋತ್ತಮ ಬಿಳಿಮಲೆಯವರು ಅಂಕಣದ ಮೂಲಕ ಹರಿಯಬಿಟ್ಟ ನಿರಂತರ ಅನುಭವ, ಆಲೋಚನೆಗಳ ಬರಹಗಳು ಒಂದೆಡೆ ಈ ಕೃತಿಯಲ್ಲಿ ದಾಖಲಾಗಿದೆ. ಸ್ಥಳೀಯತೆಯ ಸಂಸ್ಕೃತಿ ಮತ್ತು ಬದುಕಿನ ಆರಂಭದ ದಿನಗಳ ಅನುಭವದ ಮೂಲಕ ನಾಡನ್ನು ದೇಶವನ್ನು ಮತ್ತು ವಿಶ್ವವನ್ನು ಕಾಣುವ ದೃಷ್ಟಿಕೋನ; ಮೌಖಿಕ ಸಂಸ್ಕೃತಿಯನ್ನು ತಳದಲ್ಲಿ ಮತ್ತು ಕೇಂದ್ರದಲ್ಲಿ ಇಟ್ಟುಕೊಂಡು ಅದರ ಮೂಲಕ ಪುರಾಣ ಮತ್ತು ಶಿಷ್ಟಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳುವುದು; ಯಕ್ಷಗಾನ ರಂಗಭೂಮಿಯ ಆಕೃತಿಯ ಮೂಲಕ ರಾಷ್ಟ್ರೀಯ ಮತ್ತು ವಿಶ್ವದ ರಂಗಭೂಮಿ ಕಲೆಗಳನ್ನು ಅಭ್ಯಾಸ ಮಾಡುವುದು; ಭಾಷೆ ಮತ್ತು ನಾಡಿನ ಅನನ್ಯತೆಯನ್ನು ಸ್ಥಾಪಿಸಲು ನಿರ್ದಿಷ್ಟ ಯೋಜನೆಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದು; ಜಾತೀಯತೆ ಮತ್ತು ಕೋಮುವಾದಗಳು ಜನಪದ ಸಂಸ್ಕೃತಿಯ ಮೇಲೆ ನಡೆಸುತ್ತಿರುವ ಧಾಳಿಯನ್ನು ಸಂಸ್ಕೃತಿಯ ಒಳಗಿನಿಂದಲೇ ಪ್ರತಿರೋಧಿಸುವುದು; ಪರಂಪರೆಯ ಸಂಸ್ಕೃತಿಯನ್ನು ಗಲೀಜು ಮಾಡುವ ಆಧುನಿಕತೆಯ ಹುನ್ನಾರಗಳನ್ನು ಬಯಲು ಮಾಡುವುದು-ಇವೆಲ್ಲವನ್ನೂ ತಾಳಮದ್ದಲೆಯ ಅರ್ಥಗಾರಿಕೆಯಂತೆ ಹರಿಕತೆಯ ಪ್ರವಚನದಂತೆ ತುಂಬ ಆಪ್ತವಾಗಿ ಸ್ವಾರಸ್ಯಕರವಾಗಿ ಅನುಭವ ಕಥನ ಮತ್ತು ಗ್ರಂಥ ಪಠನಗಳ ಉಪಕತೆಗಳೊಂದಿಗೆ ಓದುಗರ ಜೊತೆಗೆ ಹಂಚಿಕೊಳ್ಳುವುದು. ಇದು ‘ಬಿಳಿಮಲೆ ಬಹುರೂಪ’ದ ಆಂಜನೇಯ ಶಕ್ತಿ.