Your Cart

Need help? Call +91 9535015489

📖 Print books shipping available only in India. ✈ Flat rate shipping

ಪಿ.ಲಂಕೇಶ್ ಅವರ ಆಯ್ದ ಬರಹಗಳು

P. Lankesh
$8.00

Product details

Category

Articles

Author

P. Lankesh

Publisher

Akshara Prakashana

Book Format

Ebook

Language

Kannada

Pages

108

Year Published

2009

ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು — ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ — ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು- ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.

ಅಕ್ಷರ ಪ್ರಕಾಶನಕ್ಕೆ ೫೦ ತುಂಬಿದ ೨೦೦೬ನೆಯ ವರ್ಷ, ದಿ| ಕೆ.ವಿ. ಸುಬ್ಬಣ್ಣನವರ ನೆನಪಿಗೆ, ಈ ಹೊಸ ಪುಸ್ತಕಮಾಲೆಯ ಮೊದಲ ಕಂತಿನ ೨೫ ಪುಸ್ತಕಗಳು ಬಿಡುಗಡೆಗೊಂಡವು; ೨೦೦೭ರಲ್ಲಿ ಎರಡನೆಯ ಕಂತಿನ ಇನ್ನೂ ೧೦ ಪುಸ್ತಕಗಳು ಮತ್ತು ೨೦೦೯ರಲ್ಲಿ ಇನ್ನೂ ೧೫ — ಹೀಗೆ ಒಟ್ಟು ೫೦ ಪುಸ್ತಕಗಳು ಈವರೆಗೆ ಈ ಮಾಲಿಕೆಯಲ್ಲಿ ಪ್ರಕಟಗೊಂಡಿವೆ.