ಭಾರತೀಪುರ

‘ಭಾರತೀಪುರ’, ಸೃಷ್ಟ್ಯಾತ್ಮಕ ಬರಹಗಾರನೊಬ್ಬ ಕಂಡ ಆಳವಾದ ಒಂದು ವಿರಸದ ಸಮಗ್ರ ಪರಿಚಯದ ಅಸಲುಚಿತ್ರ. ಮೌಲ್ಯಗಳ, ಕಟ್ಟಡಗಳ, ವ್ಯಕ್ತಿಗಳ ನಡುವಣ ಈ ವಿರಸಕ್ಕೆ ಸಾಹಿತ್ಯಕವಾದದ್ದೇ ಅಲ್ಲದೆ, ಬಹುಬಾರಿ ಸಮಾಜಶಾಸ್ತ್ರದ್ದು ಹಾಗೂ ಒಮ್ಮೊಮ್ಮೆ ದಾರ್ಶನಿಕವಾದದ್ದು ಆದ ಆಯಾಮವೂ ಉಂಟು. ವಸ್ತುಸ್ಥಿತಿಯ ಮಟ್ಟದಲ್ಲಿ, ಕಾದಂಬರಿಯ ಮುಖ್ಯ ಗೊಡವೆ ಸಂಪ್ರದಾಯಬದ್ಧ ಸಮಾಜದ ಆಧುನೀಕರಣ; ಆ ಸಮಾಜದ ಮೂರ್ತ-ಅಮೂರ್ತ ಸಂಕೇತಗಳನ್ನು ತೊಡೆದುಹಾಕುವುದು; ಕನಿಷ್ಠ ಅವುಗಳನ್ನು ಅಪಮೌಲ್ಯಗೊಳಿಸುವುದು, ಹೊಸ ವಸ್ತುಸ್ಥಿತಿಯನ್ನು, ಮೌಲ್ಯಗಳನ್ನು ನಿರ್ಮಿಸುವುದು. ವ್ಯಕ್ತಿಯ ಮಟ್ಟದಲ್ಲಿ ಅದರ ಮುಖ್ಯ ಗೊಡವೆ ಬ್ರಾಹ್ಮಣ ಜಮೀನ್ದಾರನ ಕುಟುಂಬದಲ್ಲಿ ಹುಟ್ಟಿದ ಧೀಮಂತನೊಬ್ಬ ತನ್ನ ಜಾತಿ ಹಾಗೂ ವರ್ಗಗಳಿಂದ ಮುಕ್ತನಾಗಿ ತನ್ನ ವರ್ಗ-ಜಾತಿಯ ಶೋಷಣೆಗೆ ಗುರಿಯಾಗಿದ್ದ ದಲಿತರ ಜೊತೆಗೆ ಏಕೀಭಾವ ಸಾಧಿಸುವುದರ ಸಂಕಟ. ಈ ಎರಡೂ ಗೊಡವೆಗಳನ್ನು ಹಾಸುಹೊಕ್ಕಾಗಿ ಮೈತುಂಬಿಸಿಕೊಂಡ ಈ ಕಾದಂಬರಿ ಅತ್ಯಂತ ಅರ್ಥವತ್ತಾದ ವಿವರಪೂರ್ಣವಾದ ಕಥೆಯನ್ನು ನೇಯುತ್ತದೆ. ಕಾದಂಬರಿಯಲ್ಲಿ ಒಂದು ಮೋಹಕವಾದ ದಾರ್ಶನಿಕ ಅರಾಜಕತೆಯಿದೆ. ಅದರಲ್ಲಿ ಮಾರ್ಕ್ಸ್, ಸಾರ್ತ್ರೆ, ಲೋಹಿಯಾ ಒಬ್ಬರನ್ನೊಬ್ಬರು ತಳ್ಳಾಡುತ್ತಾರೆ. ಅನಂತಮೂರ್ತಿಯವರು ಈ ಮೂವರು ದಾರ್ಶನಿಕರು ನೀಡುವ ಬೆಳಕಿನಲ್ಲಿ ಮಾನವನ ಪಾಡನ್ನು ಶೋಧಿಸಬಲ್ಲ ಸಾಮರ್ಥ್ಯ ಉಳ್ಳವರು.

Additional information

Category

Author

Publisher

Language

Kannada

Book Format

Ebook

Year Published

2010

Reviews

There are no reviews yet.

Only logged in customers who have purchased this product may leave a review.