“ಸಾಹಿತಿ, ನಾಟಕಕಾರ ಗಿರೀಶ ಕಾರ್ನಾಡ ನಿಧನ “,

ಬೆಂಗಳೂರು:ಕನ್ನಡದ ನಾಟಕ ಸಾಹಿತಿ, ಪ್ರಸಿದ್ಧ ರಂಗಭೂಮಿ ತಜ್ಞ, ನಾಟಕಕಾರ, ಚಿತ್ರ ನಟ, ನಿರ್ದೇಶಕ ಗಿರೀಶ ಕಾರ್ನಾಡ ಅವರು ಸೋಮವಾರ ಮುಂಜಾನೆ ನಗರದ ಲ್ಯಾವೆಲ್ಲೆ ರಸ್ತೆಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯಪೀಡಿತರಾಗಿದ್ದ ಅವರುಬಹು ಅಂಗಾಂಗ ವೈಫಲ್ಯದಿಂದ ಕೊನೆಯುಸಿರೆಳೆದರು.ಗಿರೀಶ ಕಾರ್ನಾಡರು 1934 ಮೇ 19ರಂದು ಮಹಾರಾಷ್ಟ್ರದ ಮಾಥೇರದಲ್ಲಿ ಜನಿಸಿದರು. ಇವರ ತಂದೆ ರಘುನಾಥ ಕಾರ್ನಾಡ ಮುಂಬೈಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ತಾಯಿ ಕೃಷ್ಣಾಬಾಯಿ. ಬಾಲ್ಯವಿವಾಹವಾಗಿ ಒಂದು ಮಗುವಾದ ನಂತರ ವಿಧವೆಯಾಗಿದ್ದರು. ರಘುನಾಥರ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಸೇವೆಸಲ್ಲಿಸುತ್ತಿದ್ದರು. ಈ ಸಂದರ್ಭ;ಆಗಿನ ಸಾಮಾಜಿಕ ಕಟ್ಟುಪಾಡುಗಳ ವಿರುದ್ಧವಾಗಿ ರಘುನಾಥರು ಕೈಹಿಡಿದರು. ಈ ದಂಪತಿಗಳ ಮೂರನೇ ಮಗನಾಗಿ ಗಿರೀಶ ಜನಿಸಿದರು.ಕಾರ್ನಾಡರ ಪ್ರಾಥಮಿಕ ಶಿಕ್ಷಣ ಉತ್ತರಕನ್ನಡದ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ, ಹಾಗೂ ಪದವಿ ಶಿಕ್ಷಣ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಆಯಿತು. ಆ ಬಳಿಕ ಪ್ರತಿಷ್ಠಿತ ರೋಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್ ಫರ್ಡಿನಲ್ಲಿ ಹೆಚ್ಚಿನ ವ್ಯಾಸಂಗ ಮಾಡಿದರು. ಆಕ್ಸ್‌ಫರ್ಡ್‌;ಡಿಬೇಟ್ ಕ್ಲಬ್ಬಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಇವರು. ಮದ್ರಾಸಿನಲ್ಲಿ ನೌಕರಿಯಲ್ಲಿದ್ದ ಇವರು ಶಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಇಂಗ್ಲೆಂಡಿನಲ್ಲಿ ನೆಹರೂ ಸೆಂಟರಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪೂನಾ ಫಿಲ್ಮ್ ಇನ್ಸ್ಟಿಟ್ಯೂಟಿನ ನಿರ್ದೇಶಕರಾಗಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಕೂಡಾ ಅವರು ಕಾರ್ಯನಿರ್ವಹಿಸಿರುವರು.ಕನ್ನಡ ಸಾಹಿತ್ಯದಲ್ಲಿ ನಾಟಕ ಕ್ಷೇತ್ರದ ಸಾಹಿತಿ ಎಂದು ಕರೆಯಲ್ಪಡುವ ಗಿರೀಶ ಕಾರ್ನಾಡ್, ಕನ್ನಡದಲ್ಲಿ ನಾಟಕ ರಚಿಸುತ್ತಾ ಇತರ ಭಾರತೀಯ ಭಾಷೆಗಳೊಡನೆ ಸಂಪರ್ಕವನ್ನಿಟ್ಟುಕೊಂಡು ನಟರಾಗಿ, ನಿರ್ದೇಶಕರಾಗಿ, ಸಾಂಸ್ಕ್ರತಿಕ ವಕ್ತಾರರಾಗಿ ಕೆಲಸ ಮಾಡಿದವರು.ಯಯಾತಿ, ತುಘಲಕ್, ಹಯವದನ, ನಾಗಮಂಡಲ, ತಲೆದಂಡ, ಅಗ್ನಿ ಮತ್ತು ಮಳೆ, ಅಂಜುಮಲ್ಲಿಗೆ, ಹಿಟ್ಟಿನ ಹುಂಜ, ಟಿಪ್ಪುವಿನ ಕನಸುಗಳು ಮುಂತಾದವು ಕಾರ್ನಾಡರ ಪ್ರಮುಖ ನಾಟಕ ಕೃತಿಗಳು.ಅಲ್ಲದೆ ಹಲವಾರು ಭಾಷೆಗಳ ಚಲನಚಿತ್ರಗಳಲ್ಲಿ ನಟಿಸಿರುವ ಕಾರ್ನಾಡ್ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕರೂ ಹೌದು. ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಕಾಡು, ಒಂದಾನೊಂದು ಕಾಲದಲ್ಲಿ, ಕಾನೂರು ಹೆಗ್ಗಡತಿ, ಉತ್ಸವ್ ಮುಂತಾದ ಸಿನಿಮಾಗಳು; ಸೂಫಿ ಪಂಥ ಕನಕ ಪುರಂದರ ಸಾಕ್ಷಚಿತ್ರಗಳನ್ನು ನಿರ್ದೇಶಿಸಿದ್ದಾರೆ.ಜ್ಞಾನಪೀಠ ಪುರಸ್ಕೃತಸಾಹಿತ್ಯ ಕ್ಷೇತ್ರದ ಸಾಧನೆಗೆ;ಜ್ಞಾನಪೀಠ ಪ್ರಶಸ್ತಿ ಪಡೆದ ಕಾರ್ನಾಡರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ, ಪದ್ಮಶ್ರೀ, ಪದ್ಮಭೂಷಣ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಹಾಗೂ ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.ಕೊನೆ ಸಿನಿಮಾ ಟೈಗರ್‌ ಜಿಂದಾ ಹೈಗಂಭೀರ ಪಾತ್ರಗಳನ್ನು ನಿಭಾಯಿಸುವ ಮೂಲಕ ಸಿನಿಮಾ ನಟನೆಯಲ್ಲೂ ಗುರುತಿಸಿಕೊಂಡಿದ್ದ ಕಾರ್ನಾಡರ ಕೊನೇ ಚಿತ್ರ ‘ಟೈಗರ್‌ ಜಿಂದಾ ಹೈ’. ಈ ಸಿನಿಮಾದಲ್ಲಿ ಕಾರ್ನಾಡರು;ಬಾಲಿವುಡ್ ನಟ ಸಲ್ಮಾನ್‌ ಖಾನ್‌ ಅವರೊಂದಿಗೆ ನಟಿಸಿದ್ದರು. ಲಂಕೇಶರೊಂದಿಗೆ ನಟಿಸಿದ್ದ, ಕಾದಂಬರಿ ಆದಾರಿತ ‘ಸಂಸ್ಕಾರ’ ಚಿತ್ರ ಭಾರಿ ಜನಪ್ರಿಯತೆ ಪಡೆದುಕೊಂಡಿತ್ತು.ಇವುಗಳನ್ನೂ ಓದಿ:ಧಾರ್ಮಿಕ ವಿಧಿ ವಿಧಾನಗಳಿಲ್ಲದೇ ಅಂತಿಮ ‘ಸಂಸ್ಕಾರ’ಕನ್ನಡದ ಸಂಸ್ಕೃತಿಯ ಕಂಪನ್ನು ಜಗತ್ತಿಗೆ ಪಸರಿಸಿದವರು ಕಾರ್ನಾಡ: ಸಿಎಂ ಎಚ್ಡಿಕೆಸಂಸ್ಕಾರದ-ವಿ-ಚಿತ್ರಕತೆ\\”>ಆಡಾಡತ ಆಯುಷ್ಯ | ‘ಸಂಸ್ಕಾರ’ಕ್ಕೊಂದು ಅಗ್ರಹಾರ ಸಿಕ್ಕ ಕಥೆ ಆಡಾಡತ-ಆಯುಷ್ಯ\ಆಡಾಡತ ಆಯುಷ್ಯ | ‘ಗೋಕರ್ಣ’ ಎಂಬ ಅಡ್ಡ ಹೆಸರನ್ನು ಬಿಟ್ಟು, ‘ಕಾರ್ನಾಡ’ ಆದ ಪ್ರಸಂಗಆಡಾಡತ-ಆಯುಷ್ಯ-ಗಿರೀಶ-ಕಾರ್ನಾಡರ-ಆತ್ಮಕಥೆ-ಭಾಗ-1ಆಡಾಡತ ಆಯುಷ್ಯ | ‘ಸಂಸ್ಕಾರ’ ಚಿತ್ರೀಕರಣದ ಮುಗಿಸಿ ಹೊರಟ ದಿನದ ನೆನಪುರಘುನಾಥ ಚ.ಹ. ಬರಹ | ನಮ್ಮ ತಲೆಮಾರಿಗೆ ಚಾಳೇಶದಾನ ಮಾಡಿದವರಾರು?ರಾಮಚಂದ್ರ ಗುಹಾ ಬರಹ | ಮೆಚ್ಚುಗೆಗೆ ಮಾತ್ರ ಪಾತ್ರ ಈ ಗಿರೀಶ ಕಾರ್ನಾಡ ಅಭಿವ್ಯಕ್ತಿ ಸ್ವಾತಂತ್ರ್ಯ ಸಮಾವೇಶ | ‘ನಗರ ನಕ್ಸಲ’ ಘೋಷಿಸಿಕೊಂಡ ಕಾರ್ನಾಡ್‌ಕಾರ್ನಾಡರ ಬದುಕು, ವೃತ್ತಿ, ಪ್ರವೃತ್ತಿಯ ಕುರಿತ ಚಿತ್ರಗಳು* ಕಾರ್ನಾಡ್‌ ನಿಧನ ಹಿನ್ನೆಲೆ: ಇಂದು ಸರ್ಕಾರಿ ರಜೆ ಘೋಷಣೆ, ಮೂರು ದಿನ ಶೋಕಾಚರಣೆ

courtsey:prajavani.net

https://www.prajavani.net/stories/stateregional/girish-karnad-passed-away-643106.html

Leave a Reply