Your Cart

Need help? Call +91 9535015489

📖 Print books shipping available only in India. ✈ Flat rate shipping

“ವ್ಯಂಗ್ಯಚಿತ್ರಕಾರರ ಸಂಸ್ಥೆ 12ನೇ ವಾರ್ಷಿಕೋತ್ಸವ ಇಂದು”,

ಭಾರತೀಯ ವ್ಯಂಗ್ಯಚಿತ್ರಕಾರರ ಸಂಸ್ಥೆ ಜುಲೈ6ರಂದು 12ನೇ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದೆ. ಇದರೊಂದಿಗೆ ಮಾಯಾ ಕಾಮತ್ ಸ್ಮಾರಕ ಸ್ಪರ್ಧೆ –2018ರ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ ಮತ್ತು ವ್ಯಂಗ್ಯಚಿತ್ರಗಳ ಪ್ರದರ್ಶನ ಏರ್ಪಡಿಸಲಾಗಿದೆ. ಈಚೆಗೆ 11ನೇ ಅಂತರರಾಷ್ಟ್ರೀಯ ಮಾಯಾ ಕಾಮತ್ ಸ್ಮಾರಕ ರಾಜಕೀಯ ವ್ಯಂಗ್ಯಚಿತ್ರ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಗೆ ಬಂದ ವ್ಯಂಗ್ಯಚಿತ್ರಗಳು ವಿವಿಧತೆಯಿಂದ ಕೂಡಿದ್ದು ಉತ್ತಮ ಗುಣಮಟ್ಟದಾಗಿದ್ದವು ಎಂದು ಆಯ್ಕೆ ಸಮಿತಿ ಅಭಿಪ್ರಾಯಪಟ್ಟಿದೆ. ಉದಯೋನ್ಮುಖ ವ್ಯಂಗ್ಯಚಿತ್ರಕಾರರ ಚಿತ್ರಗಳು ಈ ಪ್ರದರ್ಶನದಲ್ಲಿ ಎಲ್ಲರ ಗಮನ ಸೆಳೆದಿದ್ದವು.ಕಾರ್ಯಕ್ರಮದ ಅಂಗವಾಗಿ 80 ಭಾರತೀಯ ವ್ಯಂಗ್ಯಚಿತ್ರಗಳು ಪ್ರದರ್ಶನಗೊಳ್ಳಲಿವೆ. ಇದರಲ್ಲಿ ಆರು ಮಂದಿ ಉದಯೋನ್ಮುಖ ವ್ಯಂಗ್ಯಚಿತ್ರಕಾರರಿಗೆ ಆದ್ಯತೆ ನೀಡಲಾಗಿದೆ. ಬೆಳಿಗ್ಗೆ 10:30ಕ್ಕೆ ರಾಜ್ಯ ಸರ್ಕಾರದ ನಿವೃತ್ತ ಪ್ರಧಾನ ಕಾರ್ಯದರ್ಶಿ ಸುಧಾಕರ ರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಯಾ ಕಾಮತ್ ಟ್ರಸ್ಟ್‌ನ ಅಮರನಾಥ್ ಕಾಮತ್, ಪತ್ರಕರ್ತೆ ನೂಪುರ ಬಸು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಪ್ರದರ್ಶನ ವೀಕ್ಷಿಸಲು ಅವಕಾಶವಿದೆ. ಜುಲೈ27ರವರೆಗೂ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಇರಲಿದೆ ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.

courtsey:prajavani.net

https://www.prajavani.net/artculture/art/cartoonist-12th-anniversary-649144.html

Leave a Reply