A.N. Ramesh, Gubbi

A.N. Ramesh, Gubbi

ಎ.ಎನ್.ರಮೇಶ್ ಗುಬ್ಬಿ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ಪ್ರಸ್ತುತ ಕಾರವಾರ ಬಳಿಯ ಕೈಗಾದಲ್ಲಿರುವ ಭಾರತೀಯ ಅಣುಶಕ್ತಿ ನಿಗಮದ ಉದ್ಯೋಗಿ. ಪ್ರವೃತ್ತಿಯಲ್ಲಿ ಸಾಹಿತಿ. ಚಿತ್ರಕಥೆ, ಕವನ, ನಾಟಕ ರಚನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ‘ಹನಿ-ಹನಿ’ ಎಂಬ ಹನಿಗವನ ಸಂಕಲನ, ‘ಗುಬ್ಬಿಯ ಕಲರವ’, ‘ಎಡನೀರೊಡನೆಯನಿಗೆ ಚುಟುಕು ಪುಷ್ರ್ಪಾಚನೆ’, ‘ಚುಟುಕು-ಚಿತ್ತಾರ’, ‘ಕೇಶವನಾಮ ಚೈತನ್ಯಧಾಮ’ ಎಂಬ ಚುಟುಕು ಸಂಕಲನಗಳು, ‘ಭಾವದಂಬಾರಿ’ ಕಥಾಸಂಕಲನ, ‘ಶಕ್ತಿ ಮತ್ತು ಅಂತ’ ಅವಳಿ ನಾಟಕ ಸಂಕಲನ, ‘ಕಿಸ್ ಮಾತ್ರೆ’ ಎನ್ನುವ ಹಾಸ್ಯಗವನ ಸಂಕಲನ, ‘ಹೂವಾಡಿಗ’, ‘ಕಾಡುವ ಕವಿತೆಗಳು’ ಕವನ ಸಂಕಲನಗಳು ಇವರಿಂದ ಪ್ರಕಟವಾಗಿದೆ.

Books By A.N. Ramesh, Gubbi