A.Na.Kru

A.Na.Kru

ಕನ್ನಡ ಪ್ರಗತಿಶೀಲ ಸಾಹಿತ್ಯದ ಪ್ರವರ್ತಕರು. ಕನ್ನಡ ಸಾಹಿತ್ಯಲೋಕದ ಪ್ರಮುಖರಲ್ಲೊಬ್ಬರು. ಕರ್ನಾಟಕ, ಕನ್ನಡ ಪರ ಪ್ರಮುಖ ಹೋರಾಟಗಾರರು. ಇವರು ಕನ್ನಡ ಕಾದಂಬರಿ ಸಾರ್ವಭೌಮ ಎಂದೇ ಖ್ಯಾತರಾಗಿದ್ದರು.

ಅನಕೃ ಹುಟ್ಟಿದ್ದು ಕೋಲಾರ, ಹಾಗು ಕುಟುಂಬದ ಮೂಲ ಹಾಸನ ಜಿಲ್ಲೆಯ ಅರಕಲಗೂಡು. ತಂದೆ ನರಸಿಂಗರಾಯರು ಮತ್ತು ತಾಯಿ ಅನ್ನಪೂರ್ಣಮ್ಮನವರು. ಅನಕೃ ಮಹಾನ್ ಕನ್ನಡಾಭಿಮಾನಿಯಾಗಿದ್ದರು. ಕರ್ನಾಟಕದಲ್ಲಿ ಎಲ್ಲಾ ಭಾಷೆಯ ಜನರೂ ಇರಲಿ, ಆದರೆ ಅವರು ನಮ್ಮೊಂದಿಗೆ ಹೊಂದಿಕೊಂಡು ಹೋಗಲಿ, ಮಾತೃ ಭಾಷೆಯನ್ನು ಮೆಟ್ಟಿ, ಮುನ್ನುಗ್ಗುವುದು ಸರಿಯಲ್ಲ ಎಂಬುದು ಅವರ ಮೂಲತತ್ವವಾಗಿತ್ತು.

ಶಾಲಾ ದಿನಗಳಿಂದಲೂ ಸಾಹಿತ್ಯದ ಅಭಿರುಚಿ ಹೊಂದಿದ್ದರು. ನಟ ವರದಾಚಾರ್ಯರು ಒಡ್ಡಿದ ಸವಾಲಿಗೆ ಉತ್ತರವಾಗಿ ಒಂದೇ ರಾತ್ರಿಯಲ್ಲಿ ಮದುವೆಯೋ ಮನೆಹಾಳೋ ಎಂಬ ನಾಟಕ ರಚಿಸುವ ಮೂಲಕ ಸಾಹಿತ್ಯ ರಚನೆ ಆರಂಭಿಸಿದರು. ಅನಕೃ ಅವರಿಗೆ ಬರವಣಿಗೆಯೇ ಜೀವನೋಪಾಯವಾಗಿತ್ತು. ಅವರು ರಚಿಸಿರುವ ಸಾಹಿತ್ಯ ೮೦,೦೦೦ ಪುಟಗಳಿಗೂ ಅಧಿಕ. ಅದರಲ್ಲಿ ಕಾದಂಬರಿಗಳು ೧೧೦, ೧೫ ನಾಟಕಗಳು, ೮ ಕಥಾ ಸಂಕಲನಗಳು, ಕಲೆ,ಸಾಹಿತ್ಯ ವಿಮರ್ಶೆಗೆ ಸಂಬಂಧಿಸಿದ ಇಪ್ಪತ್ತು ಪುಸ್ತಕಗಳು, ೮ ಜೀವನ ಚರಿತ್ರೆಗಳು, ೩ ಅನುವಾದ, ೧೨ ಸಂಪಾದಿತ ಕೃತಿಗಳು, ಅಲ್ಲದೆ ಪ್ರಬಂಧ,ಹರಟೆಗಳೂ ಸೇರಿವೆ. ೧೯೩೪೧೯೬೪ ರ ಅವಧಿಯಲ್ಲಿ ೧೦೦ ಕಾದಂಬರಿಗಳನ್ನು ರಚಿಸಿರುವ , ಅನಕೃ ಅವರ ಮೊದಲನೆಯ ಕಾದಂಬರಿ ಜೀವನ ಯಾತ್ರೆ, ನೂರನೆಯ ಕಾದಂಬರಿ ಗರುಡ ಮಚ್ಚೆ.

Books By A.Na.Kru