A.P.J. Abdul Kalam

A.P.J. Abdul Kalam

ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು.
ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು. ಅಧ್ಯಯನ ನಂತರ ನಾಲ್ಕು ದಶಕಗಳ ಕಾಲ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿ.ಅರ್.ಡಿ.ಓ) ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದಲ್ಲಿ ವಿಜ್ಞಾನಿ ಮತ್ತು ವಿಜ್ಞಾನ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸಿದರು.ಭಾರತದ ನಾಗರಿಕ ಬಾಹ್ಯಾಕಾಶ ಕಾರ್ಯಕ್ರಮ ಮತ್ತು ಕ್ಷಿಪಣಿ ಅಭಿವೃದ್ಧಿ ಪ್ರಯತ್ನಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕ್ಷಿಪಣಿ ಮತ್ತು ಉಡಾವಣಾ ತಂತ್ರಜ್ಞಾನದ ಅಭಿವೃದ್ಧಿಯ ಅಧ್ಯಯನದಿಂದ, ಇವರು ಭಾರತದ ಕ್ಷಿಪಣಿ ಮಾನವ ಎಂಬ ಹೆಸರಿನಿಂದ ಚಿರಪರಿಚಿತರಾಗಿದ್ದರು. ೧೯೯೮ರಲ್ಲಿ ನೆಡೆದ ಭಾರತದ ಪೋಖ್ರಾನ್-೨ ಪರಮಾಣು ಪರೀಕ್ಷೆಯಲ್ಲಿ ಸಾಂಸ್ಥಿಕವಾಗಿ, ತಾಂತ್ರಿಕವಾಗಿ ಮತ್ತು ರಾಜಕೀಯವಾಗಿ ಒಂದು ಪ್ರಮುಖ ಪಾತ್ರ ವಹಿಸಿದರು.

ರಾಷ್ಟ್ರಪತಿ ಹುದ್ದೆಯಿಂದ ವಿರಮಿಸಿದ ಅನಂತರವೂ ಇವರು ಜನಪ್ರಿಯ ಧುರೀಣರು ಮತ್ತು ವಿಜ್ಞಾನಿಯಾಗಿ ಕಂಗೊಳಿಸುತ್ತಿದ್ದಾರೆ. ಇವರು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ‘ವಿಂಗ್ಸ್‌ ಆಫ್ ಫೈರ್’ ಎಂಬುದು ಇವರ ಆತ್ಮಕಥೆ. ಇವರು ತಮ್ಮ ‘ಇಂಡಿಯಾ ಮೈ ಡ್ರೀಮ್’, ‘ಇಂಡಿಯಾ ೨೦೨೦’ ಎಂಬ ಗ್ರಂಥಗಳಲ್ಲಿ ಭವ್ಯ ಭಾರತ ನಿರ್ಮಾಣದ ಬಗ್ಗೆ ರೂಪುರೇಷೆಗಳನ್ನು ಹಾಕಿಕೊಟ್ಟಿದ್ದಾರೆ. ‘ಮೈ ಜರ್ನಿ’, ‘ಟಾರ್ಗೆಟ್ ತ್ರಿ ಬಿಲಿಯನ್’- ಇವು ಇವರ ಇತ್ತೀಚಿನ ಕೃತಿಗಳು. ಅಪ್ರತಿಮ ದೇಶಭಕ್ತರೂ ಉತ್ತಮ ವಾಗ್ಮಿಯೂ ಆಗಿರುವ ಕಲಾಂ ಅವರು ದೇಶ ವಿದೇಶಗಳಲ್ಲಿ ಸಂಚರಿಸುತ್ತ ಜ್ಞಾನ-ವಿಜ್ಞಾನ ಪ್ರಸಾರದಲ್ಲಿ ತಮ್ಮ ಸಹಾಯಹಸ್ತ ನೀಡುತ್ತಿದ್ದಾರೆ.

Books By A.P.J. Abdul Kalam