B.Janardhan Bhat

B.Janardhan Bhat

ಡಾ. ಬಿ.ಜನಾರ್ದನ ಭಟ್ ಅವರು ಸಮಕಾಲೀನ ಕನ್ನಡದ ಹೆಸರಾಂತ ಲೇಖಕರಲ್ಲಿ ಒಬ್ಬರು. ಭಟ್ ಅವರ ಹೆಚ್ಚಿನ ಕೃತಿಗಳು ಆಳ ಮತ್ತು ಸಂಕೀರ್ಣತೆಯನ್ನು ಹೊಂದಿರುವುದು ವಿಶೇಷ.
ಅವರು ಕಾದಂಬರಿಕಾರರಾಗಿ, ಕಥೆಗಾರರಾಗಿ, ವಿಮರ್ಶಕರಾಗಿ, ಅಂಕಣಕಾರರಾಗಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ಅವರ ಸಾಹಿತ್ಯಾನುಸಂಧಾನ ಬಹುಸೂಕ್ಷ್ಮವಾದುದು. ಬಹುಭಾಷಿಕ, ಬಹುಶ್ರುತ ವಿದ್ವಾಂಸರೂ ಸೃಜನಶೀಲ ಲೇಖಕರೂ ಆಗಿರುವ ಭಟ್ ಅವರದು ಸ್ಪೋಪಜ್ಞತೆಯ ಹಾದಿ. ತಮ್ಮ ಕೃತಿಗಳಲ್ಲಿ ಹೆಚ್ಚಿನ ಸ್ವಂತಿಕೆಯ ಛಾಪನ್ನು ಒತ್ತುತ್ತಾ ಬಂದಿರುವ ಡಾ. ಜನಾರ್ದನ ಭಟ್ ಅವರದು ಬಹುಮುಖ ಪ್ರತಿಭೆ.
ಕಲ್ಲುಕಂಬವೇರಿದ ಹುಂಬ’ ಸಾಮಾಜಿಕ ಕಾದಂಬರಿಯಾಗಿದ್ದು, ನಾಡಿನ ಜನಪ್ರಿಯ ವಾರಪತ್ರಿಕೆ ‘ತರಂಗ’ ಏರ್ಪಡಿಸಿದ್ದ ಮಿನಿ ಕಾದಂಬರಿ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಪಡೆದ ಕೃತಿ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ. ತುಳುನಾಡಿನ ಜನರ ನಂಬಿಕೆ, ಆರಾಧನಾ ಪರಂಪರೆ, ಪುರಾಣ, ಐತಿಹ್ಯ, ಇತಿಹಾಸಗಳನ್ನೆಲ್ಲ ವಿವರವಾಗಿ ಕಲಾತ್ಮಕವಾಗಿ ತಮ್ಮ ಕೃತಿಗಳಲ್ಲಿ ದಾಖಲಿಸುತ್ತಾರೆ.

Books By B.Janardhan Bhat