Chandrakant Pokale

Chandrakant Pokale

ಚಂದ್ರಕಾಂತ ಪೊಕಳೆ ಅವರು 20-08-1949 ರಂದು ಜನಿಸಿದರು. ಹುಟ್ಟೂರು ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿ. ತಂದೆ- ಮಹಾಬಲೇಶ್ವರ, ತಾಯಿ- ಪಾರ್ವತಿ. ಹೈಸ್ಕೂಲುವರೆಗೆ ಮಂಚಿಕೇರಿಯಲ್ಲಿ ಓದಿದ ಅವರು, ಧಾರವಾಡದ ಕಾಲೇಜಿನಿಂದ ಬಿ.ಎ ಪದವಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಗಳಿಸಿದ್ದಾರೆ.ಚಂದ್ರಕಾಂತ ಅವರು ಕನ್ನಡ, ಮರಾಠಿ ಎರಡು ಭಾಷೆಗಳಲ್ಲೂ ಪ್ರಭುತ್ವ ಪಡೆದಿದ್ದು, ಮರಾಠಿ ಸಾಹಿತ್ಯದ ಎಲ್ಲ ಪ್ರಕಾರಗಳನ್ನೂ ಕನ್ನಡಿಗರಿಗೆ ಪರಚಯಿಸುತ್ತಿದ್ದಾರೆ. ಅಲ್ಲದೇ ಕನ್ನಡ-ಮರಾಠಿ ಭಾಷಾ ಸೇತುವೆಯಾಗಿ ಕೆಲಸಮಾಡುತ್ತಿದ್ದಾರೆ. ಅನುವಾದಕ್ಷೇತ್ರಕ್ಕೆ ತಮ್ಮನ್ನು ಸಮರ್ಪಿಸಿಕೊಂಡು ಅನುವಾದ ಯಜ್ಞದಲ್ಲಿ ತಮ್ಮ ಹವಿಸ್ಸನ್ನೂ ಧಾರೆಎರೆದು ಮರಾಠಿ ಸಾಹಿತ್ಯದಿಂದ ಬಹುಮೌಲಿಕ ಕೃತಿಗಳನ್ನು ಕನ್ನಡಕ್ಕೆ ನೀಡುತ್ತಾ ಬಂದಿರುವ ಲೇಖಕರಲ್ಲಿ ಅತ್ಯಂತ ಪ್ರಮುಖರು.ಚಂದ್ರಕಾಂತ ಪೋಕಳೆಯವರಿಗೆ 1999 ಮತ್ತು 2004 ರಲ್ಲಿ ಶ್ರೀದೇವಿ ಶಾನಭಾಗ ಪ್ರಶಸ್ತಿ, 2001ರಲ್ಲಿ ವರದರಾಜ ಆದ್ಯಪ್ರಶಸ್ತಿ, 2002 ರಲ್ಲಿ ಸಂಗಾತಿ ಅಕಾಡಮಿ ಪ್ರಶಸ್ತಿ , 2002 ಮತ್ತು 2005 ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, 2004 ರಲ್ಲಿ ವಿಶ್ವೇಶ್ವರಯ್ಯ ಸಾಹಿತ್ಯ ಪ್ರಶಸ್ತಿ ಹಾಗೂ ಕೇಂದ್ರ ಸಾಹಿತ್ಯ ಅಕಾಡಮಿ ಅನುವಾದ ಪ್ರಶಸ್ತಿ, 2008ರಲ್ಲಿ ಕುವೆಂಪು ಭಾಷಾ ಭಾರತಿ ಪ್ರಶಸ್ತಿಗಳು ದೊರೆತಿವೆ.

Books By Chandrakant Pokale