G. S. Amur

G. S. Amur

ಗುರುರಾಜ ಶಾಮಾಚಾರ್ಯ ಆಮೂರರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಹಾನಗಲ್‌ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ. ತಂದೆ ಶಾಮಾಚಾರ್ಯರು, ತಾಯಿ ಗಂಗಾದೇವಿ. ತಂದೆಗೆ ಸಂಗೀತ, ಸಾಹಿತ್ಯದಲ್ಲಿ ಆಸಕ್ತಿ. ಪ್ರಾರಂಭಿಕ ಶಿಕ್ಷಣ ಸೂರಣಗಿಯಲ್ಲಿ ಹೈಸ್ಕೂಲು ವಿದ್ಯಾಭ್ಯಾಸ ಹಾವೇರಿಯಲ್ಲಿ.ಕನ್ನಡದ ಮೊದಲ ಕೃತಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಪ್ರಕಟವಾದುದು ಮಿಲ್ಟನ್‌ ಕವಿಯ ಮೇಲೆ ಬರೆದ ‘ಮಹಾಕವಿ ಮಿಲ್ಟನ್‌’ (1966). ನಂತರ ಮೊದಲ ವಿಮರ್ಶಾ ಪ್ರಬಂದಗಳ ಕೃತಿ ‘ಕೃತಿ ಪರೀಕ್ಷೆ’. ಸಮಕಾಲೀನ ಕಥೆ-ಕಾದಂಬರಿ, ಕನ್ನಡ ಕಾದಂಬರಿಯ ಬೆಳವಣಿಗೆ, ಅ.ನ. ಕೃಷ್ಣರಾಯ, ಅರ್ಥಲೋಕ ಮುಂತಾದ ಕೃತಿಗಳಲ್ಲದೆ ಬೇಂದ್ರೆಯವರ ಗಂಗಾವತರಣವನ್ನೂ ಮಧ್ಯಬಿಂದುವಾಗಿಟ್ಟುಕೊಂಡು ಕಾವ್ಯ ಹಾಗೂ ಕಾವ್ಯೇತರ ಬರಹಗಳನ್ನೂ ವಿವೇಚಿಸುವ ‘ಭುವನದ ಭಾಗ್ಯ’ ಕೃತಿ, ವ್ಯವಸಾಯ, ಕನ್ನಡ ಕಥನ ಸಾಹಿತ್ಯ: ಕಾದಂಬರಿ, ವಿರಾಟಪುರುಷ, ಸಾತ್ವಿಕ ಪಥ, ಕಾದಂಬರಿ ಸ್ವರೂಪ, ದತ್ತಾತ್ರೇಯ ರಾಮಚಂದ್ರಬೇಂದ್ರೆ ಮುಂತಾದ 39 ಕೃತಿಗಳಲ್ಲದೆ ಚಿತ್ತಾಲರ ಆಯ್ದ ಕಥೆಗಳು, ಕೆ ಸದಾಶಿವ ಅವರ ಕಥಾ ಸಾಹಿತ್ಯ, ಅವಳ ಕಥೆಗಳು, ಬೇಂದ್ರೆ ಕಾವ್ಯ, ಕನ್ನಡ ಕಥಾಲೋಕ, ಶ್ರೀರಂಗ ಸಾರಸ್ವತ, ಹುಯಿಲಗೋಳ ನಾರಾಯಣರಾಯರ ಸಮಗ್ರ ಸಾಹಿತ್ಯ ಮುಂತಾದವುಗಳನ್ನು ಸಂಪಾದಿಸಿದ್ದಾರೆ. ಕ.ಸ.ಪಾದಿಂದ 2020ನೇ ಸಾಲಿನ ನೃಪತುಂಗ ಸಾಹಿತ್ಯ ಪ್ರಶಸ್ತಿ ಪಡೆದಿರುವ ಇವರು 2020 ಸೆಪ್ಟಂಬರ್‌ 28ರಂದು ನಿಧನರಾದರು.

Books By G. S. Amur