Girimane Shyamarao

Girimane Shyamarao

ಗಿರಿಮನೆ ಶ್ಯಾಮರಾವ್ ಹಾಸನ ಜಿಲ್ಲೆಯ ಸಕಲೇಶಪುರದ ಗಾಣದಹೊಳೆ ಗ್ರಾಮ. ಪತ್ನಿ ಶಶಿಕಲಾ ಹಾಗು ಪುತ್ರ ಚೇತನ್ ಶರ್ಮ. ಕೃಷಿಕನಾಗಿ 35 ವಸಂತಗಳ ಸುದೀರ್ಘ ಅನುಭವವಿದೆ. ಆಧುನಿಕ ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ವಿನೂತನ ರೀತಿಯ ಬರವಣೆಗೆಗಳಿಂದ ಕನ್ನಡ ಓದುಗ ಆಸಕ್ತರ ನಡುವೆ ಚಿರಪರಿಚಿತರು. ಪಶ್ಚಿಮ ಘಟ್ಟದ ಪ್ರಕೃತಿ, ಜೀವಜಗತ್ತಿನ ಪರಿಚಯ, ಮನುಷ್ಯರ ಮನಸ್ಸಿನ ಅವಲೋಕನ, ವೈಜ್ಞಾನಿಕವಾದ ವೇದದ ಒಳಗನ್ನು ತಿಳಿಯುವ ಕುತೂಹಲ ಇವೆಲ್ಲವೂ ಇವರನ್ನು ಬರವಣಿಗೆಯ ಕ್ಷೇತ್ರದೆಡೆಗೆ ಸೆಳೆದಿದೆ. ಹವ್ಯಾಸಿ ಪತ್ರಿಕಾ ಅಂಕಣಕಾರರಾಗಿದ್ದಾರೆ. ಮಕ್ಕಳ ಸಾಹಿತ್ಯ, ವ್ಯಕ್ತಿತ್ವ ವಿಕಸನ, ಚಿಂತನೆ, ಕಾದಂಬರಿ ಹೀಗೆ ಹಲವಾರು ಪ್ರಕಾರಗಳಲ್ಲಿ ಓದುಗರಿಗೆ ಮೆಚ್ಚುವಂತಹ 26ಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ.

Books By Girimane Shyamarao