H. Dundiraj

H. Dundiraj

ಎಚ್. ಡುಂಡಿರಾಜ್, ಉಡುಪಿ ಜೆಲ್ಲೆಯ ಹಟ್ಟಿಕುದ್ರುವಿನಲ್ಲಿ 18 ಆಗಸ್ಟ್ 1956ರಲ್ಲಿ ಜನಿಸಿದ ಇವರು ಕನ್ನಡದ ಹೆಸರಾಂತ ಚುಟುಕು ಕಾವ್ಯ ಸಾಹಿತಿ.
ಈವರೆಗೆ ಸುಮಾರು 45 ಪುಸ್ತಕಗಳನ್ನು ಬರೆದಿರುವ ಇವರು, ತಮ್ಮ ಪುಸ್ತಕಗಳಲ್ಲಿ ಚುಟುಕು ಸಾಹಿತ್ಯದ ಕುರಿತಾಗಿನ ಎಳೆಗಳನ್ನು ಸೂಕ್ಷ್ಮವಾಗಿ ಬಿಡಿಸಿಟ್ಟಿದ್ದಾರೆ. ಸಾಹಿತ್ಯ ಮತ್ತು ಹಾಸ್ಯದ ಸಮ್ಮಿಲನ ಇವರ ಕೃತಿಗಳ ವಿಶೇಷತೆ.
ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ. ಪದವಿಯನ್ನು ಪಡೆದಿದ್ದಾರೆ. ಸದ್ಯಕ್ಕೆ ಮಂಗಳೂರಿನ ಕಾರ್ಪೋರೇಶನ್‍ ಬ್ಯಾಂಕ್‍ನ ಸಹಾಯಕ ಮಹಾ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಾ ಇದ್ದಾರೆ.
2011ರಲ್ಲಿ ನಡೆದ ಸಂಯುಕ್ತ ಅರಬ್‍ ಸಂಸ್ಥಾನದ ಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಇವರು, ತಮ್ಮ ಕೃತಿಗಳಲ್ಲಿ ರಾಜಕೀಯ, ಕ್ರೀಡೆ ಮತ್ತು ಇತರ ಸಾಮಾಜಿಕ ವಸ್ತುಸ್ಥಿತಿಗಳ ಕುರಿತಾಗಿ ಚುಟುಕು ಕಾವ್ಯ ಹಾಗು ಗದ್ಯವನ್ನು ರಚಿಸಿದ್ದಾರೆ. ಇವರ ಚುಟುಕು ಕಾವ್ಯಗಳು ಉದಯವಾಣಿ ದಿನಪತ್ರಿಕೆಯಲ್ಲಿ ಪ್ರತಿದಿನವೂ ಪ್ರಕಟವಾಗುತ್ತಿದ್ದು ಅಪಾರ ಜನಮನ್ನಣೆ ಗಳಿಸಿದೆ.
ಪ್ರಶಸ್ತಿಗಳು ಕನ್ನಡ ಸಾಹಿತ್ಯಕ್ಕೆ ಇವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಇವರಿಗೆ ಹಲವಾರು ಪ್ರಶಸ್ತಿಗಳು ದೊರಕಿವೆ.

Books By H. Dundiraj