Jayant Kaikini

Jayant Kaikini

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಜನಿಸಿದ ಜಯಂತ ಅವರ ತಂದೆ ಗೌರೀಶ ಕಾಯ್ಕಿಣಿ ಹೆಸರಾಂತ ವಿಚಾರವಾದಿ ಲೇಖಕ. ಆಧುನಿಕ ಬದುಕಿನ ಆತಂಕಗಳನ್ನು ಕತೆಯಾಗಿಸುವ ಜಯಂತ ಕಾಯ್ಕಿಣಿ ಅವರು ಕನ್ನಡದ ಪ್ರಮುಖ ಕತೆಗಾರರಲ್ಲಿ ಒಬ್ಬರು. ’ಕತೆಗಾರ’ ಎಂಬ ವಿಶೇಷಣ ಇದೆಯಾದರೂ ಅವರೊಬ್ಬ ಪ್ರಮುಖ ಕವಿ ಕೂಡ ಹೌದು. ಪ್ರಬಂಧ, ಅಂಕಣ ಬರಹ, ಚಲನಚಿತ್ರ ಸಂಭಾಷಣೆ ಮತ್ತು ಗೀತರಚನೆ ಹೀಗೆ ಹಲವು ಪ್ರಕಾರಗಳಲ್ಲಿ ಹೆಜ್ಜೆಗುರುತು ಮೂಡಿಸಿದ್ದಾರೆ.
ರಂಗದಿಂದೊಂದಿಷ್ಟು ದೂರ, ಕೋಟಿತೀರ್ಥ, ಶ್ರಾವಣ ಮಧ್ಯಾಹ್ನ, ನೀಲಿಮಳೆ, ಒಂದು ಜಿಲೇಬಿ, ವಿಚಿತ್ರಸೇನನ ವೈಖರಿ ಕವನ ಸಂಕಲನಗಳು, ತೆರೆದಷ್ಟೇ ಬಾಗಿಲು, ದಗಡೂ ಪರಬನ ಅಶ್ವಮೇಧ, ಅಮೃತಬಳ್ಳಿ ಕಷಾಯ, ಬಣ್ಣದ ಕಾಲು, ತೂಫಾನ್ ಮೇಲ್ , ಚಾರ್ ಮಿನಾರ್, ಅನಾರ್ಕಲಿಯ ಸೇಫ್ಟಿ ಪಿನ್‌ (ಕಥಾ ಸಂಕಲನಗಳು), ಸೇವಂತ ಪ್ರಸಂಗ ಜತೆಗಿರುವನು ಚಂದಿರ, ಇತಿ ನಿನ್ನ ಅಮೃತಾ (ನಾಟಕಗಳು), ಬೊಗಸೆಯಲ್ಲಿ ಮಳೆ, ಶಬ್ದತೀರ (ಅಂಕಣಗಳು). ಎಲ್ಲೋ ಮಳೆಯಾಗಿದೆ (ಚಿತ್ರಗೀತೆಗಳ ಸಂಕಲನ), ಹಲವಾರು ಕನ್ನಡ ಚಿತ್ರಗಳಿಗೆ ಚಿತ್ರಕಥೆ, ಸಂಭಾಷಣೆ ಮತ್ತು ಗೀತೆಗಳನ್ನು ಬರೆದಿರುವ ಅವರಿಗೆ ’ಫಿಲಂಫೇರ್’ ಸೇರಿ ಅನೇಕ ಪ್ರಶಸ್ತಿಗಳು ಸಂದಿವೆ.

Books By Jayant Kaikini