K P Poornachandra Tejasvi

K P Poornachandra Tejasvi

ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ. ಅವರ ತಾಯಿ ಹೇಮಾವತಿ. ಇವರು ೧೯೩೮ ಸೆಪ್ಟೆಂಬರ್ ೮ ರಂದು ಶಿವಮೊಗ್ಗ ಜಿಲ್ಲೆಯ ಕುಪ್ಪಳಿಯಲ್ಲಿ ಜನಿಸಿದರು.ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದ ನಂತರ, ಮೈಸೂರು ವಿಶ್ವವಿದ್ಯಾನಿಲಯದಿಂದ ಕನ್ನಡದಲ್ಲಿ ಎಂ.ಎ. ಪದವಿಯನ್ನು ಪಡೆದರು.ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು.[೧] ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಿನಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು. ’ಚಿದಂಬರ ರಹಸ್ಯ’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ತೇಜಸ್ವಿ ಅವರು ಕನ್ನಡದಲ್ಲಿ ನವ್ಯ ಸಾಹಿತ್ಯ ಚಳುವಳಿಯು ಉಚ್ಛ್ರಾಯ ಸ್ಥಿತಿಯಲ್ಲಿದ್ದ ದಿನಗಳಲ್ಲಿ ಅದಕ್ಕಿಂತ ಭಿನ್ನವಾದ ನೆಲೆಯ ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದರು. ನವ್ಯ ಲೇಖಕರು ನಗರ ಕೇಂದ್ರಿತ, ವ್ಯಕ್ತಿನಿಷ್ಟ ಸಾಹಿತ್ಯ ರಚನೆಯಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಬದುಕು ಕುರಿತ ಮತ್ತು ಅದು ಹಳಹಳಿಕೆಯ ಧ್ವನಿಯಲ್ಲಿ ಇರದ ಹಾಗೆ ನೋಡಿಕೊಂಡರು. ಲೋಹಿಯಾ ಚಿಂತನೆಗಳಿಂದ ಪ್ರೇರಿತರಾಗಿದ್ದ ತೇಜಸ್ವಿ ಅವರು ಕಾರಂತರ ವೈಜ್ಞಾನಿಕ ದೃಷ್ಟಿಕೋನ ಮತ್ತು ಕುವೆಂಪು ಅವರ ಭಾವನಾಲೋಕಗಳಿಂದ ಪ್ರೇರಣೆ ಪಡೆದಿದ್ದರು. ಕಥೆ-ಕಾದಂಬರಿಗಳಿಂದ ಜನಪ್ರಿಯರಾಗಿರುವ ತೇಜಸ್ವಿ ಅವರು ಛಾಯಾಗ್ರಾಹಣ, ಸಹಜ ಕೃಷಿ, ಬೇಟೆ, ವೈಜ್ಞಾನಿಕ ಬರಹಗಳನ್ನು ಕೂಡ ಪ್ರಿಯವಾಗುವ ಹಾಗೆ ಬರೆಯಬಲ್ಲರು. 2001ರ ಪಂಪ ಪ್ರಶಸ್ತಿ ಪುರಸ್ಕ್ರತರು. ಇವರು 05-04-2007ರಂದು ನಿಧನರಾದರು.

Books By K P Poornachandra Tejasvi