ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ ಈಗಿನ ಕನಕಪುರ ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು. ‘ಶ್ರೀ ರಾಮಾವತಾರ ಸಂಪೂರ್ಣವಾದಾಗ’ ಕೃತಿಯು ಸಹ ಮಾರಾಟದಲ್ಲಿ ದಾಖಲೆ ನಿರ್ಮಿಸಿದೆ. ಶ್ರೀರಾಮಾಯಾಣದ ಮಹಾಪ್ರಸಂಗಗಳು, ಶ್ರೀಮದ್ ರಾಮಾಯಣದ ಮಹಾಪ್ರಸಂಗಗಳು, ವೇದ ಸಂಸ್ಕೃತಿಯನ್ನು 10 ಕೃತಿಗಳಲ್ಲಿ ಪರಿಚಯಿಸಿದ್ದಾರೆ. ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ, ವಿದ್ವನ್ಮಣಿ, ವೇದಭೂಷಣ, ಗಮಕ ರತ್ನಾಕರ, ಕರ್ನಾಟಕ ಕಲಾಶ್ರೀ, ಉಪನ್ಯಾಸ ಕೇಸರಿ ಬಿರುದು ಸಂದಿವೆ. ಕನ್ನಡ, ಇಂಗ್ಲಿಷ್ ಹಾಗೂ ತಮಿಳು ಭಾಷೆಯಲ್ಲಿ ರಾಮಾಯಣವನ್ನು ಆಧಿಕೃತವಾಗಿ ಉಪನ್ಯಾಸ ನೀಡುವ ವಿದ್ವತ್ ಗಾಗಿ ಸಾಹಿತ್ಯಾಸಕ್ತರು ಅವರಿಗೆ ‘ರಾಮಾಯಣಾಚಾರ್ಯರು’ ಎಂದೇ ಕರೆಯುತ್ತಾರೆ.