M A Hegde

M A Hegde

ಪ್ರೊ. ಎಂ. ಎ. ಹೆಗಡೆ ಅವರು ಸಂಸ್ಕೃತ, ಇಂಗ್ಲಿಷ್ ಹಾಗೂ ಕನ್ನಡ ಭಾಷೆಗಳಲ್ಲಿ ಸಮಾನ ಪ್ರಭುತ್ವ ಹೊಂದಿದ ನಾಡಿನ ಕೆಲವೇ ವಿದ್ವಾಂಸರಲ್ಲಿ ಒಬ್ಬರು. ಇವರು ದಿನಾಂಕ 3-7-1948 ರಂದು ಜನಿಸಿದರು. ಈಗಿನ ವಾಸ ಶಿರಸಿಯಲ್ಲಿ. ತಂದೆ ಅಣ್ಣಪ್ಪ ಹೆಗಡೆ ಮತ್ತು ತಾಯಿ ಕಾಮಾಕ್ಷಿ. ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಜೋಗಿನ್ಮನೆಯವರಾದ ಹೆಗಡೆಯವರು ಸಂಸ್ಕೃತ ವಿದ್ವಾಂಸರು ಮತ್ತು ಗ್ರಂಥಕರ್ತರು , ಭಾಷಾಶಾಸ್ತ್ರಜ್ಞರು.ಇವರು ಹುಬ್ಬಳ್ಳಿಯ ಕಾಡಸಿದ್ದೇಶ್ವರ ಆರ್ಟ್ಸ್ ಕಾಲೇಜು ಮತ್ತು ಪಿ.ಸಿ.ಜಾಬಿನ್ ಸೈನ್ಸ್ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ೧೯೭೧ರಿಂದ ೧೯೭೩ರ ವರೆಗೆ ಸೇವೆಸಲ್ಲಿಸಿದ್ದಾರೆ. ಸಿದ್ದಾಪುರದ ಮಹಾತ್ಮಾ ಗಾಂಧಿ ಶತಾಬ್ಧಿ ಕಾಲೇಜಿನಲ್ಲಿ ಸಂಸ್ಕೃತ ಉಪನ್ಯಾಸಕರಾಗಿ,ಆ ವಿಭಾಗದ ಮುಖ್ಯಸ್ಥರಾಗಿ ೧೯೭೩ ರಿಂದ ೨೦೦೪ ರ ವರೆಗೆ ಸೇವೆಸಲ್ಲಿಸಿದ್ದಾರೆ.

Books By M A Hegde