Naa Someshwar

Naa Someshwar

ನಾ. ಸೋಮೇಶ್ವರ ಮೇ 14 1955 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ತಂದೆ ನಾರಪ್ಪ ಹಾಗೂ ತಾಯಿ ಅಂಜನಾ. ವಿದ್ಯಾರ್ಥಿಯಾಗಿದ್ದಾಗಲೇ ‘ಜೀವನಂದಿ’ ಎಂಬ ಮಾಸಿಕ ಪತ್ರಿಕೆಯನ್ನು ಪ್ರಕಟಿಸಿದ್ದರು. ವೃತ್ತಿಯಿಂದ ವೈದ್ಯರಾಗಿ ಪ್ರವೃತ್ತಿಯಿಂದ ಲೇಖಕರಾಗಿ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ.
ಡಾ. ಸೋಮೆಶ್ವರ ಚಂದನ ಟೆಲಿವಿಷನ್ ವಾಹಿನಿಯಲ್ಲಿ ’ಥಟ್ ಅಂತ ಹೇಳಿ’ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು.
ತಮ್ಮ ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ವೃತ್ತಿಯಿಂದ ವೈದ್ಯರಾದ ಸೋಮೇಶ್ವರರು ಒಂದು ಫಾರ್ಮಸ್ಯೂಟಿಕಲ್ ಕಂಪೆನಿಗೆಸಲಹೆಗಾರರಾಗಿ ಕಾರ್ಯನಿರ್ವಹಿಸಿದರು.

Books By Naa Someshwar