T.P.Ashok

T.P.Ashok

ಟಿ.ಪಿ.ಅಶೋಕ ಇವರು ೧೯೫೫ ಆಗಸ್ಟ್ ೨೬ರಂದು ನಂಜನಗೂಡಿನಲ್ಲಿ ಜನಿಸಿದರು. ಸಾಗರದ ಲಾಲ ಬಹಾದ್ದೂರ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಪ್ರಜಾವಾಣಿ ಹಾಗು ಮಯೂರ ಪತ್ರಿಕೆಗಳಲ್ಲಿ ಅನೇಕ ವಿಮರ್ಶಾ ಲೇಖನಗಳನ್ನು ಬರೆದಿದ್ದಾರೆ. ಸಂಸ್ಕೃತಿ, ಪರಂಪರೆ ಹೊಂದಿದ ಸ್ಥಳೀಯ ಸಾಹಿತ್ಯ, ವಿಭಿನ್ನ ಭೌಗೋಳಿಕ ಪ್ರದೇಶಗಳ ಸಾಹಿತ್ಯವನ್ನು ಪರಿಪೂರ್ಣವಾಗಿ ಅಧ್ಯಯನ ಮಾಡಿದಾಗ ಸಮಗ್ರತೆಯ ದೃಷ್ಟಿಕೋನ ನಮ್ಮಲ್ಲಿ ಮೂಡುತ್ತದೆ ಎಂದು ಖ್ಯಾತ ವಿಮರ್ಶಕರಾದ ಟಿ.ಪಿ.ಅಶೋಕರವರು ಹೇಳಿದ್ದಾರೆ.
ನವ್ಯ ಕಾದಂಬರಿಗಳ ಪ್ರೇರಣೆಗಳು, ಹೊಸ ಹೆಜ್ಜೆ ಹೊಸ ಹಾದಿ, ಕಾರಂತರ ಕಾದಂಬರಿಗಳಲ್ಲಿ ಗಂಡು ಹೆಣ್ಣು, ಸಾಹಿತ್ಯ ಸಂಪರ್ಕ, ವಾಸ್ತವತಾವಾದ, ಸಾಹಿತ್ಯ ಸಂದರ್ಭ, ಶಿವರಾಮಕಾರಂತ: ಎರಡು ಅಧ್ಯಯನಗಳು, ಪುಸ್ತಕ ಪ್ರೀತಿ, ವೈದೇಹಿ ಅವರ ಕಥೆಗಳು, ಯು. ಆರ್. ಅನಂತಮೂರ್ತಿ:ಒಂದು ಅಧ್ಯಯನ, ತೇಜಸ್ವಿ ಕಥನ, ಕುವೆಂಪು ಕಾದಂಬರಿ: ಎರಡು ಅಧ್ಯಯನಗಳು, ಸಾಹಿತ್ಯ ಸಂಬಂಧ ಮುಂತಾದ ಕೃತಿಗಳನ್ನು ಪ್ರಕಟಿಸಿದ್ದಾರೆ.

Books By T.P.Ashok