ಪ್ಯಾರಿಸ್ಸಿನ ಕಾರ್ಮಿಕರು ೧೮೭೧ರ ಮಾರ್ಚ್ ೧೮ರಂದು ತಮ್ಮ ನಗರವನ್ನು ಆಳುತ್ತಿದ್ದ ಬಂಡವಾಳಶಾಹಿಗಳನ್ನು ಓಡಿಸಿ, ೧೦ ದಿನಗಳಲ್ಲಿ ಸ್ಥಾಪಿಸಿದ ಕಾರ್ಮಿಕರ ಆಡಳಿತವನ್ನು “ಪ್ಯಾರಿಸ್ ಕಮ್ಯೂನ್” ಎಂದು ಕರೆದರು. “ಪ್ಯಾರಿಸ್ ಕಮ್ಯೂನ್” ಜಗತ್ತಿನಲ್ಲೇ ಮೊದಲ ಕಾರ್ಮಿಕರ ಪ್ರಭುತ್ವ ಮತ್ತು ಕ್ರಾಂತಿ ಎಂದೇ ಅದರೂ ಅದು ಇನ್ನೂ ಹಲವು ರೀತಿಯಲ್ಲಿ ಚಿರಂತನ ಮಹತ್ವವನ್ನು ಪಡೆದಿದೆ. “ಪ್ಯಾರಿಸ್ ಕಮ್ಯೂನ್” ಎಂಬ ಕಾರ್ಮಿಕರ ಕ್ರಾಂತಿಕಾರಿ ಪ್ರಭುತ್ವವು ಕೇವಲ ೭೨ ದಿನಗಳ ಕಾಲ ಮಾತ್ರ ಬಾಳಿತಾದರೂ, ಅದು ತನ್ನ ಸಾಧನೆ-ವೈಫಲ್ಯಗಳು ಬಲ-ದೌರ್ಬಲ್ಯಗಳು ಎರಡರಿಂದಾಗಿಯೂ ಆ ನಂತರದ ಕಾರ್ಮಿಕ ಪ್ರಭುತ್ವ ಮತ್ತು ಕ್ರಾಂತಿಗಳಿಗೆ ಸ್ಫೂರ್ತಿಯ ಚಿಲುಮೆಯೂ ದಾರಿದೀವಿಗೆಯೂ ಆಯಿತು. ಮಾರ್ಕ್ಸ್-ಏಂಗೆಲ್ಸ್ ಕಮ್ಯೂನಿನ ಹೋರಾಟಕ್ಕೆ ಸಕ್ರಿಯವಾದ ಭೌತಿಕ ಮತ್ತು ಸೈದ್ಧಾಂತಿಕ ಬೆಂಬಲ ಕೊಟ್ಟಿದ್ದಲ್ಲದೆ, ಅದರ ಅನುಭವವನ್ನು ಕ್ರೋಢೀಕರಿಸಿ ಮುಂದಿನ ಕ್ರಾಂತಿಗಳಿಗೆ ದಾರಿದೀವಿಗೆ ಆಗುವಂತೆ ಸಿದ್ಧಾಂತೀಕರಿಸಿದ ಕೃತಿ ಇದು.