ಭಗವದ್ಗೀತೆಯ ಸಾರಸರ್ವಸ್ವ ಭಾಗ-೧ ನಮ್ಮ ಭಾರತೀಯ ಚಿಂತನೆಯ ಮೂಲಾಧಾರ ವೇದ, ಉಪನಿಷತ್ತು, ಭಗವದ್ಗೀತೆಗಳು. ಇವುಗಳ ಪಾರಮ್ಯವನ್ನು ಒಪ್ಪಿಕೊಳ್ಳಲೀ ಒಪ್ಪಿಕೊಳ್ಳದಿರಲೀ ಅವು ಪ್ರತಿಪಾದಿಸುವ ಚಿಂತನೆಯ ಸಾರವನ್ನು ತಮ್ಮದೇ ಆದ ರೀತಿಯಲ್ಲಿ ಅಳವಡಿಸಿಕೊಳ್ಳದಿರುವ ಭಾರತೀಯ ಚಿಂತನಾ ಪ್ರಕಾರ ಇಲ್ಲವೆಂದೇ ಹೇಳಬೇಕು. ಭಾರತದಲ್ಲಿ ತತ್ತ್ವಶಾಸ್ತ್ರವನ್ನು ಎತ್ತಿ ಹಿಡಿದುದು ಜ್ಞಾನಕ್ಕಾಗಿ ಅಲ್ಲ. ಮನುಷ್ಯ ಈ ಬದುಕಿನಲ್ಲಿ ಸಾಧಿಸಬಹುದಾದ ಅತ್ಯುನ್ನತ ಗುರಿಯನ್ನು ತಲುಪುವುದಕ್ಕಾಗಿ. ಇಲ್ಲಿ ತತ್ತ್ವಶಾಸ್ತ್ರವು ಆಶ್ಚರ್ಯ, ಕುತೂಹಲಗಳಿಂದಾಗಿ ರೂಪುಗೊಂಡಿಲ್ಲ, ಬದಲಿಗೆ ಅದು ರೂಪುಗೊಂಡಿರುವುದು ಬದುಕನ್ನು ಸುಂದರಗೊಳಿಸಿಕೊಳ್ಳುವುದಕ್ಕಾಗಿ. ಇಲ್ಲಿ ತತ್ತ್ವಾನುಸಂಧಾನವು ಕೇವಲ ಬೌದ್ಧಿಕ ಜಿಜ್ಞಾಸೆ […]
