ನಮ್ಮ ಮನೆ ಪೂರಾ ನಮ್ಮದಾಗಲಿ… ಬಹಳ ದಿನಗಳ ಹಿಂದೆ, ಮರಾಠಿ ಮೂಲದ ಕನ್ನಡ ಅನುವಾದ ,’ ನಮ್ಮ ಮನೆ ನಮ್ಮದೆಷ್ಟು ‘ ಲೇಖನವನ್ನು ಕಸ್ತೂರಿ ಮಾಸ ಪತ್ರಿಕೆಯಲ್ಲಿ ಓದಿದ್ದೆ. ಅಷ್ಟೊಂದು ಆಸೆಪಟ್ಟು, ದುಡಿದ ಹಣವನ್ನೆಲ್ಲ ವ್ಯಯಿಸಿ, ಕಟ್ಟಿಸಿದ ಮನೆಯಲ್ಲಿ ಒಬ್ಬ ಮನುಷ್ಯ ಎಷ್ಟು ಕಾಲ ಇರುತ್ತಾನೆ ಎಂಬುದರ ವಿಶ್ಲೇಷಣೆಯಿತ್ತು ಅದರಲ್ಲಿ. ಒಬ್ಬ ಮನುಷ್ಯ ಪೂರ್ಣವಾಗಿ ನೂರು ವರ್ಷ ಬದುಕಿದರೂ ಬದುಕಿನ ಹೋರಾಟ, ಬದುಕಿಗಾಗಿ ಸಂಪಾದನೆ, ಅನ್ನುತ್ತ ಬೆಳಿಗ್ಗೆ ಹತ್ತರಿಂದ ಸಾಯಂಕಾಲ ಆರರ ವರೆಗೆ ಅಂದರೆ ಮೂರರ ಒಂದು […]
