ನಂಬುವದೋ…. ಬಿಡುವದೋ…ನೀವೇ ಹೇಳಿ… ನಮ್ಮ ಕಡೆಗೆ ಕೆಲವು ನಂಬಿಕೆಗಳಿವೆ. ಅವು ಮೂಢ ನಂಬಿಕೆಗಳೇ ಅಲ್ಲವೇ ಎಂಬುದನ್ನು ಬಲ್ಲವರು ಹೇಳಬೇಕು.’ಮೂಢ’ ಶಬ್ಧ ನಮ್ಮ ಶಬ್ಧಕೋಶಗಳೊಳಗೆ ಸೇರುವಷ್ಟರಲ್ಲೇ ನಮ್ಮ ನಂಬುಗೆಗಳು ಗಟ್ಟಿಗೊಂಡಿದ್ದವು. ಅವುಗಳನ್ನು ನಂಬಿ ಅನಾಹುತಗಳೇನೂ ಆಗಿರಲಿಲ್ಲ. ಅಂದ ಮೇಲೆ ಬದಲಿಸಬೇಕೆಂಬ ಭಾವನೆ, ಒತ್ತಾಯ ಯಾವುದೂ ಇರಲಿಲ್ಲ. ನಂಬಿದ್ದು ಆಕಸ್ಮಿಕವಾಗಿ ನಿಜವಾದರೆ ನಂಬಿಗೆಗೆ credit, ನಿಜವಾಗಲಿಲ್ಲವೋ’ಕತ್ತೆ ಬಾಲ’ ಹೋಯ್ತು ಎಂಬ ತತ್ವ ನಮ್ಮನ್ನು ಸುರಕ್ಷಿತ ವಲಯದಲ್ಲೇ ಇರಗೊಟ್ಟಿತ್ತು. ಇಂದು ಇದೆಲ್ಲ ಯಾಕೆ ನೆನಪಾಯಿತೆಂದರೆ ಬೆಳಿಗ್ಗೆ ಸೀರೆಯುಡುವಾಗ ಅದು ಗೊತ್ತಿಲ್ಲದೇ ಉಲ್ಟಾ […]
