ಶ್ರೀ ಗುರುಭ್ಯೋ ನಮಃ ಹರಿಃ ಓಂ ವಿಷ್ಣು ಸಹಸ್ರನಾಮದಲ್ಲಿ ಬರುವ ಸಾವಿರ ನಾಮಗಳು ಭಗವಂತನ ಗುಣವಾಚಕ ನಾಮಗಳಾಗಿವೆ. ನಮ್ಮ ಹೆಸರು ಗುಣವಾಚಕವಲ್ಲ. ಕರೆದಾಗ ಓಗೊಡಲು ಇಟ್ಟ ಹೆಸರು. ಆದರೆ ಭಗವಂತನ ಪ್ರತೀ ನಾಮ ಆತನ ಗುಣವನ್ನು ವರ್ಣಿಸುತ್ತದೆ. ನಮ್ಮಲ್ಲಿ ಅನೇಕ ಸಹಸ್ರನಾಮಗಳಿವೆ. ಬಹಳ ಪ್ರಸಿದ್ಧವಾದ ಲಲಿತ ಸಹಸ್ರನಾಮˌ ಶಿವ ಸಹಸ್ರನಾಮˌ ಗಣೇಶ ಸಹಸ್ರನಾಮˌ ನರಸಿಂಹ ಸಹಸ್ರನಾಮ ಇತ್ಯಾದಿ. ಈ ಎಲ್ಲಾ ಸಹಸ್ರನಾಮಗಳಿಗಿಂತ ಹೆಚ್ಚು ವ್ಯಾಖ್ಯಾನವಿರುವˌ ಹೆಚ್ಚು ಮಂದಿ ವಿದ್ವಾಂಸರು ಭಾಷ್ಯ ಬರೆದಿರುವˌ ಮಹಾಭಾರತದ ಭಾಗವಾಗಿರುವˌ ಸುಪ್ರಸಿದ್ಧ ಸಹಸ್ರನಾಮ […]
